ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೆ ನಿತೀಶ್ ಕುಮಾರ್ ಆಯ್ಕೆ….

Promotion

ಬಿಹಾರ,ನವೆಂಬರ್,15,2020(www.justkannada.in):  ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನೆಲೆ  ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೆ ನಿತೀಶ್ ಕುಮಾರ್ ಆಯ್ಕೆಗೊಂಡಿದ್ದಾರೆ.kannada-journalist-media-fourth-estate-under-loss

ಇಂದು ನಡೆದ ಎನ್ ಡಿಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆಯಲ್ಲಿ, ನಿತೀಶ್ ಕುಮಾರ್ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಹೀಗಾಗಿ ಸತತ 4ನೇ ಬಾರಿ ಸಿಎಂ ಆಗಿ ನಿತೀಶ್ ಕುಮಾರ್ ಆಯ್ಕೆಗೊಂಡಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ನವೆಂಬರ್ 10ರಂದು ಪ್ರಕಟಗೊಂಡಿದ್ದು, ಎನ್‌ಡಿಎ ಮೈತ್ರಿಕೂಟ ಬಹುಮತ ಗಳಿಸಿದೆ. ಆರ್‌ಜೆಡಿ ನೇತೃತ್ವದ ಮಹಾಘಟಬಂದನ್ 110 ಸ್ಥಾನಗಳನ್ನಷ್ಟೇ ಗಳಿಸಿದೆ. 75 ಸ್ಥಾನಗಳಲ್ಲಿ ಗೆಲುವು ಪಡೆಯವ ಮೂಲಕ ಆರ್‌ಜೆಡಿಯು ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೆ, ಬಿಜೆಪಿ 74 ಹಾಗೂ ಜೆಡಿಯು 43 ಸ್ಥಾನ ಗಳಿಸಿವೆ.

Key words: Nithish Kumar  -re-elected – Bihar- chief minister- NDA alliance