8ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ.

Promotion

ಪಾಟ್ನಾ,ಆಗಸ್ಟ್,10,2022(www.justkannada.in): ಬಿಹಾರದಲ್ಲಿ ರಾಜಕೀಯ ಹೈಡ್ರಾಮಾಗೆ ತೆರೆ ಬಿದ್ದಿದ್ದು,  8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಿಹಾರ ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಿಎಂ ಆಗಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು.

ನಿನ್ನೆಯಷ್ಟೇ ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡು ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಆರ್ ಜೆಡಿ, ಕಾಂಗ್ರೆಸ್ ಜೊತೆ ಸೇರಿ  ಮಹಾಘಟಬಂಧನ್‌ ಸರ್ಕಾರ ರಚನೆ ಮಾಡಿದ್ದು ಇಂದು  ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ನಿನ್ನೆ ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರದ ಪತನಗೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್ ಕುಮಾರ್ ಬಳಿಕ ರಾಜ್ಯಪಾಲರ ಬಳಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ಅದಾದ ಬಳಿಕ ಇಂದು ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರು ನಿತೀಶ್ ಕುಮಾರ್ ಅವರನ್ನು ಆಹ್ವಾನಿಸಿದ್ದರು.

Key words: Nitish Kumar -sworn – Bihar -CM