ಹಿರಿಯ ನಟಿ, ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ

Promotion

ಉತ್ತರ ಪ್ರದೇಶ, ಮಾರ್ಚ್ 7, 2020 (www.juskannada.in): ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ಜಯಪ್ರದಾ ಅವರಿಗೆ ಉತ್ತರ ಪ್ರದೇಶ ನ್ಯಾಯಾಲಯ ಇಂದು ಜಾಮೀನು ರಹಿತ ವಾರೆಂಟ್​ ಹೊರಡಿಸಿದೆ.

ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ 57 ವರ್ಷದ ಜಯಪ್ರದಾ ಅವರು ಉತ್ತರ ಪ್ರದೇಶದ ರಾಮ್​ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಚುನಾವಣಾ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು.

ಇದೀಗ ವಾರೆಂಟ್​ ಹೊರಡಿಸಿದ್ದು, ಮುಂದಿನ ಏಪ್ರಿಲ್​ 20ರಂದು ವಿಚಾರಣೆ ನಡೆಯಲಿದೆ. ಚುನಾವಣೆಯಲ್ಲಿ ಜಯಪ್ರದಾ ಅವರು ಸಮಾಜವಾದಿ ಪಕ್ಷದ ಪ್ರತಿಸ್ಪರ್ಧಿ ಅಜಂ ಖಾನ್​ ವಿರುದ್ಧ ಸುಮಾರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಹೀನಾಯ ಸೋಲನ್ನು ಅನುಭವಿಸಿದ್ದರು.