ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ದಚಿತ್ರಕ್ಕಿಲ್ಲ ಅವಕಾಶ: ಕೇಂದ್ರದಿಂದ ಅನುಮತಿ ನಿರಾಕರಣೆ.

Promotion

ನವದೆಹಲಿ,ಜನವರಿ,7,2023(www.justkannada.in):  ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಕರ್ನಾಟಕ ರಾಜ್ಯದ ಸ್ತಬ್ದಚಿತ್ರಕ್ಕೆ ಅವಕಾಶ ನೀಡಲು ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ. ಬೇರ ರಾಜ್ಯಗಳಿಗೆ ಅವಕಾಶ ನೀಡುವ  ಕಾರಣಕ್ಕೆ ಕರ್ನಾಟಕ ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಣೆ. ಮಾಡಿದೆ.

ಕಳೆದ 13 ವರ್ಷಗಳಿಂದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ಸ್ತಬ್ದಚಿತ್ರ ಪಾಲ್ಗೊಂಡಿತ್ತು. ಆದರೆ ಈ ಬಾರಿ ಗಣರಾಜ್ಯೋತ್ಸವದಲ್ಲಿ ರಾಜ್ಯದ ಸ್ತಬ್ಧಚಿತ್ರ ಇಲ್ಲ. ಕರ್ನಾಟಕ ಸರ್ಕಾರ ಸಿರಿಧಾನ್ಯ ರೇಷ್ಮೆ, ನಾರಿಶಕ್ತಿ ಸೇರಿ ನಾಲ್ಕು ವಿಷಯಗಳನ್ನ ಕೊಟ್ಟಿತ್ತು.  ಆದರೆ ಅಂತಿಮ ಹಂತ ಸಭೆಯಲ್ಲಿ ರಾಜ್ಯದ ಸ್ತಬ್ದ ಚಿತ್ರಕ್ಕೆ ಅನುಮತಿ ನಿರಾಕರಿಸಲಾಗಿದೆ.

ತಮಿಳುನಾಡು ಮತ್ತು ಕೇರಳಕ್ಕೆ ಈ ಬಾರಿ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದ್ದು,  ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳು ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿವೆ.

Key words: No chance – Karnataka-tablo – Republic Day -permission