ಅವಧಿ ಪೂರ್ವ ಚುನಾವಣೆ ಇಲ್ಲ- ಸಿಎಂ ಬೊಮ್ಮಾಯಿ ಸ್ಪಷ್ಟನೆ.

ಹುಬ್ಬಳ್ಳಿ, ಡಿಸೆಂಬರ್ 24,2022(www.justkannada.in):  ಅವಧಿ ಪೂರ್ವ ಚುನಾವಣೆ ಮಾಡುವ ಯೋಚನೆಯನ್ನು ನಮ್ಮ ಸರ್ಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು  ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,   ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿಯ ಆಧಾರದ ಮೇಲೆ  ಸಕಾರಾತ್ಮಕ ಜನಾದೇಶ ಪಡೆಯಲು ನಾವು  ಪ್ರಯತ್ನ ಮಾಡು ತ್ತಿದ್ದೇವೆ. ಬಹುಶಃ ಕಾಂಗ್ರೆಸ್ ಗೆ ಸಮಯ ಕೊಟ್ಟಷ್ಟು ಅವರ ಒಳಜಗಳ ಹೆಚ್ಚಾಗುತ್ತದೆ ಎಂದು ಅಭದ್ರತೆ ಕಾಡುತ್ತಿದೆ. ಚುನಾವಣೆ ಮುಂಚೆಯಾಗುತ್ತದೆ ಜಗಳವಾಡಬೇಡಿ ಎಂದು  ಕಾಂಗ್ರೆಸ್ ನ ಕಾರ್ಯಕರ್ತರಿಗೆ ನೀಡಿರುವ  ಸಂದೇಶ  ಎಂದರು.

Key words: No early -elections – CM Bommai- clarified.