ಪರೀಕ್ಷೆ ಇಲ್ಲದೇ ಪಾಸ್, ಬೇಸಿಗೆ ರಜೆ ನಿರ್ಧಾರ ಇಲ್ಲ: ಸಚಿವ ಸುರೇಶ್ ಕುಮಾರ್

Promotion

ಬೆಂಗಳೂರು, ಮಾಚ್‍ 14, 2021 (www.justkannada.in): 

ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಉತ್ತಿರ್ಣ ಮಾಡುವ ಮತ್ತು ಶಾಲಾ ಮಕ್ಕಳಿಗೆ ಬೇಸಿಗೆ ರಜೆ ನೀಡುವ ಬಗ್ಗೆ ಘೋಷಣೆ ಮಾಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಯಾವ ನಿರ್ಧಾರ ತೆಗೆದುಕೊಂಡಿಲ್ಲ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದ ಶಾಲೆಗಳಲ್ಲಿ ಒಂದರಿಂದ 6ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಪಾಸ್ ಮಾಡಲಾಗುವುದು ಎನ್ನುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಒಂದರಿಂದ ಐದನೇ ತರಗತಿಯ ಸರ್ಕಾರಿ ಶಾಲೆ ಮಕ್ಕಳಿಗೆ ಆಕಾಶವಾಣಿಯಲ್ಲಿ ಕಲಿಯೋಣ ನಲಿಯೋಣ ಕಾರ್ಯಕ್ರಮ ಬಿತ್ತರಿಸಲಾಗುತ್ತಿದೆ. ದೂರದರ್ಶನದಲ್ಲಿ ಸಂವೇದ ತರಗತಿಗಳು ನಡೆಯುತ್ತಿವೆ. ಶಿಕ್ಷಕರು ವಿದ್ಯಾರ್ಥಿಗಳ ಕಲಿಕೆಯ ಪ್ರಗತಿಯನ್ನು ಸ್ಥಳೀಯ ಸಂಪನ್ಮೂಲಗಳ ನೆರವಿನೊಂದಿಗೆ ಪರಾಮರ್ಶೆ ಮಾಡುತ್ತಿದ್ದಾರೆ. ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿಲ್ಲ ಎಂದು ತಿಳಿಸಿದ್ದಾರೆ.