ಕಾಂಗ್ರೆಸ್ ನಲ್ಲಿ ಯಾವುದೇ ಬಣ ಇಲ್ಲ: ಕೊಟ್ಟ ಖಾತೆಯನ್ನ ನಿಭಾಯಿಸುತ್ತೇನೆ- ಹೆಚ್.ಸಿ ಮಹದೇವಪ್ಪ.

Promotion

ಬೆಂಗಳೂರು,ಮೇ,27,2023(www.justkannada.in): ನಾನು ಯಾವತ್ತೂ ಸಚಿವ ಸ್ಥಾನ, ಇಂತಹದ್ದೇ ಖಾತೆ ಬೇಕು ಎಂದು ಕೇಳಿಲ್ಲ. ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ನೂತನ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.

ಇಂದು ನೂತನ ಸಚಿವರಾಗಿ 24 ಮಂದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು ತಮಗೆ ಮಂತ್ರಿಗಿರಿ ಒಲಿದ ಕುರಿತು ಮಾತನಾಡಿದ ಹೆಚ್.ಸಿ ಮಹದೇವಪ್ಪ,  ನಾನು ಯಾವತ್ತೂ ಸಚಿವ ಸ್ಥಾನ, ಇಂತಹದ್ದೇ ಖಾತೆ ಬೇಕು ಎಂದು ಕೇಳಿಲ್ಲ. ಮುಖ್ಯಮಂತ್ರಿಗಳು ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಕಾಂಗ್ರೆಸ್​ ನಲ್ಲಿ ಯಾವುದೇ ಬಣ ಇಲ್ಲ, ಇರೋದು ಕಾಂಗ್ರೆಸ್​ ಬಣ. ನಮ್ಮ ಕ್ಷೇತ್ರದ ಜನರು, ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ. ಕ್ಷೇತ್ರದ ಜತೆಗೆ ರಾಜ್ಯದ ಅಭಿವೃದ್ಧಿಗೆ ಗಮನಕೊಡುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ-ದಿನೇಶ್ ಗುಂಡೂರಾವ್

ನೂತನ ಸಚಿವರಾಗಿ ಆಯ್ಕೆಯಾಗಿರುವ ದಿನೇಶ್ ಗುಂಡೂರಾವ್ ಮಾತನಾಡಿ, ನನಗೆ ಯಾವುದೇ ಖಾತೆ ನೀಡಿದರೂ ನಿಭಾಯಿಸುವೆ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ನಾವು ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು. ಗೊಂದಲ ಸೃಷ್ಟಿಸುವ ಕೆಲಸವನ್ನು ವಿಪಕ್ಷಗಳು ಮಾಡಬಾರದು ಎಂದು ಹೇಳಿದರು.

Key words: no faction – Congress-minister-position- HC Mahadevappa.