ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡುವ ಬಗ್ಗೆ ಮಾಹಿತಿ ಇಲ್ಲ- ಸಚಿವ ಶ್ರೀರಾಮುಲು.

Promotion

ಉತ್ತರ ಕನ್ನಡ,ಡಿಸೆಂಬರ್,9,2022(www.justkannada.in): ಬಿಜೆಪಿಯಲ್ಲಿ ಹೊಸ ಹೊಸಮುಖಗಳಿಗೆ ಆದ್ಯತೆ ನೀಡುವ ವಿಚಾರ ಸಂಬಂಧ ಈ ಬಗ್ಗೆ ಮಾಹಿತಿ ಇಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದರು.

ಉತ್ತರಕನ್ನಡದಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ಪಕ್ಷ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ. ಪಕ್ಷದಲ್ಲಿ ಮೂಲ ಬಿಜೆಪಿಗರನ್ನ ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಲ್ಲರನ್ನೂ ಒಗ್ಗಟ್ಟಾಗಿ ಕರೆದುಕೊಂಡು ಚುನಾವಣೆ ಎದರಿಸುತ್ತೇವೆ.  ಕಾಂಗ್ರೆಸ್ ಬುಡ ಸಮೇತ ಕಿತ್ತು ಹಾಕುವ ಕೆಲಸ ಮಾಡುತ್ತೇವೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words:  no information- about- giving- priority -new faces – BJP-Minister- Sriramulu