ಯಾವ ನಾಯಕರೂ ಪಕ್ಷದ ವಿರುದ್ದ ಮಾತನಾಡಿಲ್ಲ- ವಿಪಕ್ಷ ನಾಯಕ ಆರ್.ಅಶೋಕ್.

Promotion

ಬೆಂಗಳೂರು,ನವೆಂಬರ್,20,2023(www.justkannada.in): ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮತ್ತು ವಿಪಕ್ಷ ನಾಯಕರ ಆಯ್ಕೆ ಬೆನ್ನಲ್ಲೆ ಬಿಜೆಪಿಯಲ್ಲಿ ಉಂಟಾಗಿರುವ ಅಸಮಾಧಾನ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಯಾವ ನಾಯಕರೂ ಪಕ್ಷದ ವಿರುದ್ದ ಮಾತನಾಡಿಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಕಲ್ಯಾಣ ಕರ್ನಾಟಕದಿಂದ ಪ್ರವಾಸ ಮಾಡುತ್ತೇವೆ.  ಅಸಮಾಧಾನಿತ ನಾಯಕರ ಜೊತೆ ಮಾತನಾಡುತ್ತೇನೆ. ಸೋಮಣ್ಣ ಸೇರಿ ಎಲ್ಲರ ಜೊತೆ ಮಾತನಾಡುತ್ತೇನೆ. ಎಲ್ಲರ ಜತೆ ಚರ್ಚೆ ಮಾಡುತ್ತೇನೆ ಎಂದರು.

ನಗರದ ವೈಟ್​ಫೀಲ್ಡ್ ​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ತಾಯಿಮಗು ಸಾವನ್ನಪ್ಪಿದ ಪ್ರಕರಣಕ್ಕೆಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಆರ್.ಅಶೋಕ್,  ಮೃತರ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರಕೊಡಬೇಕು.  ಸರ್ಕಾರದ ಅಚಾತುರ್ಯದಿಂದ ಅವಘಡ ನಡೆದಿದೆ.  ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ಹಾಕಬೇಕು ಎಂದರು.

Keywords: No leader -spoken -against – party-Opposition leader -R. Ashok.