ಗೊಂದಲ ಬೇಡ: ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ-ಡಿಸಿಎಂ ಅಶ್ವಥ್ ನಾರಾಯಣ್ ಸ್ಪಷ್ಟನೆ…

Promotion

ಮಂಡ್ಯ,ಜು,6,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕು ಸಮುದಾಯದ ಹಂತಕ್ಕೆ ತಲುಪಿಲ್ಲ. ಹೀಗಾಗಿ ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.jk-logo-justkannada-logo

ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆ ಇದೆ. ಸೋಂಕು ಸಮುದಾಯ ಹಂತಕ್ಕೆ ತಲುಪಿಲ್ಲ. ಹೀಗಾಗಿ ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ. ಜನ ಜೀವನ ಕಟ್ಟುಕೊಳ್ಳುತ್ತಿರುವಾಗ ಲಾಕ್ ಡೌನ್ ಬೇಡ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ತಿಳಿಸಿದರು. no-lockdown-state-dcm-ashwath-narayan-clarified

ಕೊರೋನಾ ಗುಣಪಡಿಸಲು ಔಷಧಿ ಲಭ್ಯವಿದೆ. ಯಾರೂ ಆತಂಕ, ಭಯ ಪಡುವ ಅವಶ್ಯಕತೆಯಿಲ್ಲ. ಸೋಂಕಿತರಲ್ಲಿ ಶೇ.90ರಷ್ಟು ಜನ ಗುಣಮುಖರಾಗುತ್ತಿದ್ದಾರೆ. ರಾಜ್ಯ ಸರ್ಕಾರ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತಿದೆ. ಸರ್ಕಾರಕ್ಕೆ ಹಣದ ಕೊರತೆ ಇಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.

Key words: no lockdown – state-DCM -Ashwath Narayan- clarified.