ಸಿದ್ಧರಾಮಯ್ಯಗೆ ರಾಜ್ಯದಲ್ಲಿ ಯಾರೂ ಸರಿಸಾಟಿ ಇಲ್ಲ- ಹಾಡಿಹೊಗಳಿದ ಮಾಜಿ ಸಚಿವ ವಿನಯ್ ಕುಲಕರ್ಣಿ.

Promotion

ಬೆಳಗಾವಿ,ಮಾರ್ಚ್,20,2023(www.justkannada.in): ಸಿದ್ದರಾಮಯ್ಯ ಲೆವೆಲ್​ಗೆ ರಾಜ್ಯದಲ್ಲಿ ಯಾರೂ ಸರಿಸಾಟಿ ಇಲ್ಲ. ಸಿದ್ದರಾಮಯ್ಯರನ್ನು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತ ಮಾಡಬೇಡಿ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದರು.

ಬೆಳಗಾವಿಯಲ್ಲಿ ಮಾತನಾಡಿದ ವಿನಯ್ ಕುಲಕರ್ಣಿ, ನಾವು ಕೂಡ ಸಿದ್ದರಾಮಯ್ಯರನ್ನು ಕ್ಷೇತ್ರಕ್ಕೆ ಆಹ್ವಾನಿಸಿದ್ದೇವೆ. ಯಾವ ಸಿಎಂ ನೀಡದ ಕೊಡುಗೆಯನ್ನು ಸಿದ್ದರಾಮಯ್ಯ ‌ಕೊಟ್ಟಿದ್ದಾರೆ. ಸಿದ್ದರಾಮಯ್ಯ ‌ಕೊಟ್ಟ ಕೊಡುಗೆ ಯಾರಿಂದಲೂ ಕೊಡಲು ಸಾಧ್ಯವಿಲ್ಲ. ಈ ಹಿಂದೆ ಯಾರೂ ಕೊಟ್ಟಿಲ್ಲ ಮುಂದೆ ಯಾರೂ ಕೊಡುವುದಿಲ್ಲ ಎಂದು  ಸಿದ್ದರಾಮಯ್ಯರನ್ನು ಹಾಡಿ ಹೊಗಳಿದರು.

ಶಿಗ್ಗಾಂವಿ ಕ್ಷೇತ್ರದಿಂದ ತಮ್ಮ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ವಿನಯ್ ಕುಲಕರ್ಣಿ,ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನನ್ನ ನಿರ್ಧಾರವಲ್ಲ. ಸಿಎಂ ವಿರುದ್ಧ ಸ್ಪರ್ಧೆ ಮಾಡಬೇಕೆಂಬುದು ಹೈಕಮಾಂಡ್ ನಿರ್ಧಾರ ಎಂದು ಸ್ಪಷ್ಟಪಡಿಸಿದರು.

ಧಾರವಾಡಕ್ಕೆ ಹೋಗುವುದಕ್ಕೆ ನನಗೆ ಕೋರ್ಟ್ ನಿರ್ಬಂಧ ಇದೆ. ನಾನು ಶಿಗ್ಗಾಂವಿಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನಿಸಲಿದೆ. ಶಿಗ್ಗಾಂವಿ ಒಂದೇ ಅಲ್ಲ, ನನಗೆ ಇನ್ನೂ ನಾಲ್ಕೈದು ಕ್ಷೇತ್ರಗಳಿವೆ. ದೇಶದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗಿರುವುದಕ್ಕೆ ನಾನು ಸಾಕ್ಷಿ. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದರು.

Key words: no match – Siddaramaiah – state- Vinay Kulkarni- praised