ಯಾವುದೇ ಶಾಸಕರು ಜೆಡಿಎಸ್ ಪಕ್ಷ ಬಿಟ್ಟು ಹೋಗಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

Promotion

ಹಾಸನ,ನವೆಂಬರ್,8,2023(www.justkannada.in):  ಯಾವುದೇ ಶಾಸಕರು ಜೆಡಿಎಸ್  ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ  ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಿನ್ನೆ ನಡೆದ  ಸಭೆಯಲ್ಲಿ 19 ಶಾಸಕರ ಪೈಕಿ 18 ಶಾಸಕರು ಭಾಗಿಯಾಗಿದ್ದರು. ಶಾಸಕ ಶರಣಗೌಡ ಕಂದಕೂರ್​  ಬಂದಿರಲಿಲ್ಲ. ಕಂದಕೂರ್​ ಅವರಲ್ಲಿ ಸ್ವಲ್ಪ ಗೊಂದಲ ಇದೆ. ಅವರನ್ನು ಕರೆದು ಮಾತನಾಡ್ತೇನೆ. ಶಾಸಕರು ಪಕ್ಷ ಬಿಟ್ಟು ಹೋಗ್ತಾರೆಂದು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಆದರೆ ನಮ್ಮ ಶಾಸಕರು  ಮೇಲೆ ಯಾವುದೇ ಅನುಮಾನ ಇಲ್ಲ. ಕಾಂಗ್ರೆಸ್​ ಆಮಿಷಕ್ಕೆ ಒಳಗಾಗಿ ಯಾವ ಶಾಸಕರು ಪಕ್ಷ ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವರೊಂದಿಗೆ ಉಪಹಾರ ಸಭೆ ನಡೆಸಿದ ಮುಖ್ಯಮಂತ್ರಿಗಳು, ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಜೆಡಿಎಸ್‌ ನ ಶಾಸಕರು ಸೇರಿದಂತೆ ಸುಮಾರು 50 ನಾಯಕರನ್ನು ಕರೆತರುವಂತೆ ಸೂಚಿಸಿದ್ದಾರೆ. ಇನ್ನು ಹಲವು ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಹಲವು ಬಾರಿ ಹೇಳಿದ್ದಾರೆ. ಕಾಂಗ್ರೆಸ್ ತನ್ನ ಶಾಸಕರನ್ನು ಒಟ್ಟಿಗೆ ಇರಿಸಿಕೊಳ್ಳಲು ಹೆಣಗಾಡುತ್ತಿದೆ ಎಂದು ಕೆಲವು ಮಾಧ್ಯಮ ಚಾನೆಲ್‌ ಗಳು ವರದಿ ಮಾಡಿವೆ. ಅವರಲ್ಲಿ ಕೆಲವರು ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ ಎಂದು  ಹೆಚ್.ಡಿಕೆ ಟಾಂಗ್ ನೀಡಿದರು.

Key words: No MLA -left – JDS -party- Former CM -HD Kumaraswamy.