ಏಸುಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ- ಸಚಿವ ಆರ್. ಅಶೋಕ್ ಹೇಳಿಕೆ…

ಬೆಂಗಳೂರು,ಡಿ,30,2019(www.justkannada.in):   ಏಸುಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಕನಕಪುರದಲ್ಲಿ ಏಸುಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದ ಹಿನ್ನೆಲೆ ಈ ಬಗ್ಗೆ ಹಲವು ಬಿಜೆಪಿ ನಾಯಕರು ಟೀಕೆ ವ್ಯಕ್ತಪಡಿಸಿದ್ದರು. ಈ  ಸಂಬಂಧ ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಆರ್. ಅಶೋಕ್, ಏಸು ಪ್ರತಿಮೆ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ರಾಮನಗರ ಜಿಲ್ಲಾಧಿಕಾರಿ  ವರದಿ ನೀಡುತ್ತಾರೆ. ವರದಿ ನೀಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ಇಂದು ಬೆಳಿಗ್ಗೆ ಮಹಾರಾಷ್ಟ್ರ ಗಡಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್,  ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಖ್ಯಾತೆ ಹೊಸದೇನಲ್ಲ. ಹೊಸ ಸರ್ಕಾರ ಬಂದಾಗ ಖ್ಯಾತೆ ತೆಗೆಯೋದು ಸಾಮಾನ್ಯವಾಗಿದೆ.  ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಆದರೆ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Key words: no opposition – construction – Statue – Jesus –Minister- R.  Ashok