ಜ.26 ರಂದು ರೈತರ ಟ್ರ್ಯಾಕ್ಟರ್ ರ್ಯಾಲಿ ಬಗ್ಗೆ ಯಾವುದೇ ಆದೇಶ ನೀಡುವುದಿಲ್ಲ- ಸುಪ್ರೀಂಕೋರ್ಟ್ ಸ್ಪಷ್ಟನೆ…

ನವದೆಹಲಿ,ಜನವರಿ,20,2021(www.justkannada.in):  ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ಜನವರಿ 26 ರಂದು ರೈತರು ಹಮ್ಮಿಕೊಂಡಿರುವ ಟ್ರ್ಯಾಕ್ಟರ್ ರ್ಯಾಲಿ ಬಗ್ಗೆ ಯಾವುದೇ ಆದೇಶ ನೀಡುವುದಿಲ್ಲ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟನೆ ನೀಡಿದೆ.

ಜನವರಿ 26ರಂದು ರೈತರು ಟ್ರಾಕ್ಟರ್ ರ್ಯಾಲಿಗೆ ತಡೆ ನೀಡುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ಖಂಡಿಸಿ  ರೈತರು ಜನವರಿ 26 ರಂದು ಹಮ್ಮಿಕೊಂಡಿರುವ ಟ್ರ್ಯಾಕ್ಟರ್ ರ್ಯಾಲಿ ಬಗ್ಗೆ ಯಾವುದೇ ಆದೇಶ ನೀಡುವುದಿಲ್ಲ. ಇದಕ್ಕೆ  ಸಂಬಂಧಿಸಿದಂತೆ ನಾವು ಮಧ್ಯ ಪ್ರವೇಶಿಸಲ್ಲ.  ಪೊಲೀಸರಿಗೆ ಕ್ರಮ ಕೈಗೊಳ್ಳುವ ಸಂಪೂರ್ಣ ಅಧಿಕಾರವಿದೆ ಎಂದು ತಿಳಿಸಿದೆ.No order - farmers' -tractor rally - Jan. 26 - Supreme Court

ಈ ಮೂಲಕ ರೈತರ ಹೋರಾಟದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಲು  ನಿರಾಕರಿಸಿದೆ.  ಕೇಂದ್ರ ಸರ್ಕಾರದ ನೂತನ ಕಾಯ್ದೆಗಳನ್ನ ವಿರೋಧಿಸಿ ಜನವರಿ 26 ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ನವದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ಆಯೋಜಿಸಲು ರೈತ ಸಂಘಟನೆಗಳು ಭಾರಿ ಸಿದ್ಧತೆ ನಡೆಸಿವೆ.

Key words: No order – farmers’ -tractor rally – Jan. 26 – Supreme Court