ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಇಲ್ಲ: ರಾಜ್ಯದ ಎಲ್ಲಾ ಅರ್ಹರಿಗೂ ಲಸಿಕೆ ನೀಡಲು ಸಿದ್ಧ- ಸಚಿವ ಡಾ.ಕೆ.ಸುಧಾಕರ್…

ಬೆಂಗಳೂರು,ಏಪ್ರಿಲ್,22,2021(www.justkannada.in):  ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಇಲ್ಲ. 5,500 ಮೆಟ್ರಿಕ್ ಟನ್ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.jk

 ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಜಂಬು ಸಿಲಿಂಡರ್ ಗಳಲ್ಲಿ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. ಆಕ್ಸಿಜನ್ ಪೂರೈಕೆ ಸಂಬಂಧ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಜತೆಯೂ ಚರ್ಚಿಸಿದ್ದೇವೆ, ಈಗಾಗಲೇ ಆಕ್ಸಿಜನ್ ಉತ್ಪಾದಕರ ಜೊತೆ ಮಾತುಕತೆ ನಡೆದಿದೆ. 40,000 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜಾಗಿದೆ  ಎಂದು ತಿಳಿಸಿದರು. no oxygen -problem – state-Minister- Dr. K. Sudhakar-mysore

ರೆಮ್ ಡಿಸಿವಿರ್ ಬಗ್ಗೆ ತಪ್ಪು ಕಲ್ಪನೆಯಿದೆ. ಅದನ್ನು ಪಡೆದರೆ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತೇವೆ ಎಂದುಕೊಂಡಿದ್ದಾರೆ. ಆದರೆ ರೆಮ್ ಡಿಸಿವಿರ್ ಗಿಂತ ಸ್ಟೆರಾಯ್ಡ್  ಪರಿಣಾಮಕಾರಿ. ಉತ್ತಮವಾಗಿ ಕೆಲಸ ಮಾಡುತ್ತದೆ ಎಂದು ಸಚಿವ ಸುಧಾಕರ್ ತಿಳಿಸಿದರು.

ರಾಜ್ಯದಲ್ಲಿ ಎಲ್ಲಾ ಅರ್ಹರಿಗೂ ಕೋವಿಡ್ ಲಸಿಕೆ ನೀಡಲು ಸರ್ಕಾರ ಸಿದ್ದವಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

Key words: no oxygen -problem – state-Minister- Dr. K. Sudhakar-mysore