ಲಾಕ್ ಡೌನ್ ಅವಧಿಯಲ್ಲಿ ಯಾವುದೇ ರೀತಿ ಪಾಸ್ ವಿತರಣೆ ಇಲ್ಲ- ಪೊಲೀಸ್ ಇಲಾಖೆ ಸ್ಪಷ್ಟನೆ…

ಬೆಂಗಳೂರು,ಏಪ್ರಿಲ್,28,2021(www.justkannda.in): ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ  14 ದಿನಗಳ ಕಾಲ ರಾಜ್ಯ ಸರ್ಕಾರ ಜನತಾ ಕರ್ಫ್ಯೂ ವಿಧಿಸಿದ್ದು ಈ ವೇಳೆ ಪಾಸ್ ವಿತರಣೆ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.no pass - lockdown –time- police department -clear.

no pass - lockdown –time- police department -clear.

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಹಾಗೂ ಮೈಸೂರು ನಗರ ಪೊಲೀಸ್ ವತಿಯಿಂದ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಲಾಗಿದೆ.  28-4-2021 ರಿಂದ 12-5-2021 ರವರೆಗೆ ವಿಧಿಸಿರುವ ಲಾಕ್ ಡೌನ್ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ವತಿಯಿಂದ ಯಾವುದೇ ರೀತಿಯ ಪಾಸ್ ಗಳನ್ನು ಯಾವುದೇ ಉದ್ದೇಶಕ್ಕಾಗಿ ವಿತರಿಸಲಾಗುತ್ತಿಲ್ಲ. ಸರ್ಕಾರದ ಆದೇಶದಲ್ಲಿ ವಿನಾಯಿತಿ ನೀಡಿರುವ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಮ್ಮ ಸ್ಥಳಗಳಿಗೆ ಗುರುತಿನ ಚೀಟಿ ಅಥವಾ ಸಮರ್ಥನೀಯ ದಾಖಲಾತಿಗಳನ್ನ ಹಾಜರುಪಡಿಸಿ ಪ್ರಯಾಣಿಸಬಹುದು ಎಂದು ಸ್ಪಷ್ಟನೆ ನೀಡಿದೆ.no pass - lockdown –time- police department -clear.

ಹಾಗೆಯೇ 28-4-2021 ರಿಂದ 12-5-2021 ರವರೆಗೆ ವಿಧಿಸಿರುವ ಲಾಕ್ ಡೌನ್ ಅವಧಿಯಲ್ಲಿ  ಮೈಸೂರು ನಗರ ಪೊಲೀಸ್ ವತಿಯಿಂದ ಯಾವುದೇ ರೀತಿಯ ಪಾಸ್ ಗಳನ್ನು ಯಾವುದೇ ಉದ್ದೇಶಕ್ಕಾಗಿ ವಿತರಿಸಲಾಗುತ್ತಿಲ್ಲ. ಸರ್ಕಾರದ ಆದೇಶದಲ್ಲಿ ವಿನಾಯಿತಿ ನೀಡಿರುವ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಮ್ಮ ಸ್ಥಳಗಳಿಗೆ ಗುರುತಿನ ಚೀಟಿ ಅಥವಾ ಸಮರ್ಥನೀಯ ದಾಖಲಾತಿಗಳನ್ನ ಹಾಜರುಪಡಿಸಿ ಪ್ರಯಾಣಿಸಬಹುದು ಎಂದು  ತಿಳಿಸಿದೆ.

Key words: no pass – lockdown –time- police department -clear.