ರಾಜ್ಯದಲ್ಲಿ ಕಾವೇರಿ ಹೋರಾಟ ಮತ್ತು ನಿಫಾ ವೈರಸ್ ಆತಂಕ: ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು ಹೀಗೆ…?

Promotion

ಮೈಸೂರು,ಸೆಪ್ಟಂಬರ್,22,2023(www.justkannada.in): ಕಾವೇರಿ ನದಿ ನೀರು ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ. ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ವಿಚಾರ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನಮ್ಮ ರಾಜ್ಯದ ರೈತರ ಹಿತ ನಮಗೆ ಮುಖ್ಯ. ಈ ಕುರಿತು ಇಂದು ಕ್ಯಾಬಿನೆಟ್ ಸಭೆ ನಡೆಯಲಿದೆ. ಸಭೆಯಲ್ಲಿ ಎಲ್ಲರೂ ಒಂದು ತೀರ್ಮಾನಕ್ಕೆ ಬರುತ್ತೇವೆ. ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ. ಲೋಕಸಭೆ ಚುನಾವಣೆ ಹಿನ್ನಲೆ ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ನಿಫಾ ವೈರಸ್ ಭೀತಿ: ನಮ್ಮ ರಾಜ್ಯದಲ್ಲಿ ಅಂತ ಯಾವುದೇ ಪ್ರಕರಣ ಬೆಳಕಿಗೆ ಬಂದಿಲ್ಲ.

ರಾಜ್ಯದಲ್ಲಿ ನಿಫಾ ವೈರಸ್ ಭೀತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಸದ್ಯಕ್ಕೆ ನಮ್ಮ ರಾಜ್ಯದಲ್ಲಿ ಅಂತ ಯಾವುದೇ ಪ್ರಕರಣ ಬೆಳಕಿಗೆ ಬಂದಿಲ್ಲ.ನೆರೆ ರಾಜ್ಯ ಕೇರಳದಲ್ಲಿಯೂ ಕೂಡ  ನೀಫಾ ವೈರಸ್ ಸೆಪ್ಟಂಬರ್ 15 ರಿಂದೀಚೆಗೆ ಯಾವುದೇ ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಇಲ್ಲಿವರೆಗೆ  ನಿಫಾ ವೈರಸ್  ಕುರಿತು ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ ಈಗಾಗಲೇ ರಾಜ್ಯದಲ್ಲಿ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ನಿಫಾ  ವೈರಸ್ ಕಾಣಿಸಿ ಕೊಳ್ಳುವ ಸಾಧ್ಯತೆ ಕಡಿಮೆ ಇದೆ ಎಂದು ತಿಳಿಸಿದರು.

Key words: No politics – Cauvery issue-Minister -Dinesh Gundurao.