ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ: ಆತುರದಿಂದ ಶಾಲಾ-ಕಾಲೇಜು ಆರಂಭ ಬೇಡ- ಸಚಿವ ಡಾ.ಕೆ.ಸುಧಾಕರ್.

ಬೆಂಗಳೂರು,ಜೂನ್,28,2021(www.justkannada.in):  ಆತುರದಿಂದ ಶಾಲಾ-ಕಾಲೇಜುಗಳ ಆರಂಭ ಬೇಡ. ಶಾಲೆ ಆರಂಭದ ಬಗ್ಗೆ ಎಚ್ಚರಿಕೆಯ ಹೆಜ್ಜೆ ಇಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.jk

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ. ರಾಜ್ಯಕ್ಕೆ ನಿರಂತರವಾಗಿ ಲಸಿಕೆ ಪೂರೈಕೆಯಾಗುತ್ತಿದೆ. ಆದರೆ  ಪ್ರತಿನಿತ್ಯ 10 ಲಕ್ಷ ಡೋಸ್ ನೀಡುವ ಕೆಲಸ ಆಗುತ್ತಿಲ್ಲ ಎಂದು ತಿಳಿಸಿದರು.

ಕಲ್ಯಾಣ ಮಂಟಪಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಮನೆಗಳಲ್ಲಿ ಜಾಗ ಸಾಕಾಗುವುದಿಲ್ಲವೆಂದು ಕಲ್ಯಾಣ ಮಂಟಪಗಳಲ್ಲಿ ಅನುಮತಿ ನೀಡಲಾಗಿದೆ. ಆದರೆ ಕಲ್ಯಾಣ ಮಂಟಪಗಳಲ್ಲಿ ಹೆಚ್ಚು ಜನರನ್ನ ಸೇರಿಸಲಾಗುತ್ತಿದ್ದು, ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿದೆ. ಇದಕ್ಕೆ ಜಿಲ್ಲಾಧಿಕಾರಿಗಳು ಅಧಿಕಾರಿಗಳನ್ನ ಹೊಣೆಹಗಾರರನ್ನಾಗಿಸುವ ಕೆಲಸ ಮಾಡಬೇಕು. ಈ ಸಂಬಂಧ ಸಿಎಂ ಬಿಎಸ್ ವೈ ಮತ್ತು ಸಿಎಸ್ ಗೆ ಮನವಿ ಮಾಡುತ್ತೇನೆ. ಕೋವಿಡ್ ನಿಯಮ ಉಲ್ಲಂಘಿಸುವ ಕಲ್ಯಾಣ ಮಂಟಪಗಳ ವಿರುದ್ಧವೇ ಕ್ರಮ ಕೈಗೊಳ್ಳುವ ಕುರಿತು ಚಿಂತನೆ ನಡೆಸಲಾಗುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Key words: no vaccine -shortage – school-college –start-Minister -Dr. K. Sudhakar.