ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯಲ್ಲ: ವಿಪಕ್ಷಗಳ ಟೀಕೆಗೆ ಟಾಂಗ್ ಕೊಟ್ಟ ಸಚಿವ ಪರಮೇಶ್ವರ್.

Promotion

ಬೆಂಗಳೂರು,ಮೇ,25,2023(www.justkannada.in):  ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಲು ವಿಳಂಬ ನೀತಿ ಅನುಸರಿಸುತ್ತಿರುವ ಬಗ್ಗೆ ಟೀಕಿಸಿದ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಸಚಿವ ಡಾ.ಜಿ.ಪರಮೇಶ್ವರ್ ಟಾಂಗ್ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್,  ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳು ಮಾತನಾಡುವುದನ್ನ ಗಮನಿಸಿದ್ಣೇನೆ. ಮೊದಲ ಸಂಪುಟದಲ್ಲೇ ಆದೇಶ ಹೊರಡಿಸಲಾಗುತ್ತದೆ . ಸಂಬಂಧ ಪಟ್ಟ ಇಲಾಖೆಗಳಲ್ಲಿ ಪ್ರಕ್ರಿಯೆ ನಡೆಯುತ್ತಿದೆ. 2ನೇ ಸಂಪುಟದಲ್ಲಿ ಸ್ಪಷ್ಟವಾಗಿ ಘೋಷಣೆಯಾಗಲಿದೆ. ವಿಪಕ್ಷ ನಾಯಕರು ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರಿಗೆ ಹೊಟ್ಟೆ ಉರಿ.  ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯಲ್ಲ ಎಂದರು.

ಭಜರಂಗದಳ ಬ್ಯಾನ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್,  ಬ್ಯಾನ್ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಶಾಂತಿ ಕದಡುವ ಸಂಘಟನೆಗಳ ವಿರುದ್ದ ಕ್ರಮ ಕೈಗೊಳ್ಳುತ್ತೇವೆ. ಅವಶ್ಯಕತೆ ಇದ್ದರೇ ಭಜರಂಗದಳ ಬ್ಯಾನ್ ಮಾಡತ್ತೇವೆ ಎಂದು ತಿಳಿಸಿದರು.

Key words: No withdrawal -guarantee –plans-Minister- Parameshwar- tongue -opposition