ಬಾಕಿ ತೆರಿಗೆ ಪಾವತಿಸದ ಹಿನ್ನೆಲೆ: ಬಿಬಿಎಂಪಿಯಿಂದ ಮಂತ್ರಿಮಾಲ್  ವಸ್ತುಗಳು ಜಪ್ತಿ.

ಬೆಂಗಳೂರು,ಫೆಬ್ರವರಿ,18,2023(www.justkannada.in):  ಭಾರೀ ಮೊತ್ತದ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ  ನಗರದ ಮಂತ್ರಿ ಸ್ಕ್ವೇರ್ ಮಾಲ್​ ಅನ್ನು  ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ  ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ಮಾರ್ಷಲ್​​ಗಳು, ಪೊಲೀಸ್ ಅಧಿಕಾರಿಗಳ ಜತೆ ಮಂತ್ರಿ ಮಾಲ್ ಗೆ ಆಗಮಿಸಿ . ಮಾಲ್​​ ಕಚೇರಿಯ ಕುರ್ಚಿ, ಟೇಬಲ್, ಕಂಪ್ಯೂಟರ್ ಹಾಗೂ ಇತರ ವಸ್ತುಗಳನ್ನು ಬಿಬಿಎಂಪಿ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಕಳೆದ 5 ವರ್ಷಗಳಿಂದ ತೆರಿಗೆ ಪಾವತಿಸದೆ ಮಂತ್ರಿಮಾಲ್ ಕಳ್ಳಾಟವಾಡಿದ್ದು ಕಳ್ಳಾಟಕ್ಕೆ ಬ್ರೇಕ್ ಹಾಕಲು ಮುಂದಾದ ಬಿಬಿಎಂಪಿ ಇಂದು ಮಂತ್ರಿಮಾಲ್ ನ ವಸ್ತುಗಳನ್ನ ಮುಟ್ಟುಗೋಲು ಹಾಕಿಕೊಂಡಿದೆ.

ಮಂತ್ರಿ ಮಾಲ್ ಸುಮಾರು 32 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದೆ. 2020ರ ಆಗಸ್ಟ್​​​ನಲ್ಲಿ ಬಿಬಿಎಂಪಿಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಲಾಗಿತ್ತು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರೂ ಮಾಲ್ ಆಡಳಿತವು ತೆರಿಗೆ ಪಾವತಿಸಲು ಕ್ರಮ ಕೈಗೊಂಡಿರಲಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

Key words: non-payment- tax –dues- Mantrimal- items – BBMP.