KSRTC ನೌಕರರಿಗೆ ಸಂಬಳ ನೀಡದಿರುವುದು ಆಡಳಿತ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ದಿನೇಶ್ ಗುಂಡೂರಾವ್ ಟೀಕೆ 

kannada t-shirts

ಬೆಂಗಳೂರು,ನವೆಂಬರ್,15,2020(www.justkannada.in) : ಕೆಎಸ್‌ಆರ್‌ಟಿಸಿಯ 4 ನಿಗಮಗಳ ನೌಕರರಿಗೆ ವೇತನ ಕೊಡದಿರುವುದು ಸಾರಿಗೆ ಇಲಾಖೆ ಮತ್ತು ಆಡಳಿತ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.kannada-journalist-media-fourth-estate-under-loss

ಸುಮಾರು 1.35 ಲಕ್ಷ ನೌಕರರಿಗೆ ಸಂಬಳ ಆಗಿಲ್ಲ

ಸ್ವತಃ ಉಪಮುಖ್ಯಮಂತ್ರಿ ಕೈಯಲ್ಲೇ ಸಾರಿಗೆ ಇಲಾಖೆಯಿದ್ದರೂ ಸುಮಾರು 1.35 ಲಕ್ಷ ನೌಕರರಿಗೆ ಸಂಬಳ ಆಗಿಲ್ಲ ಎಂದು ಬೇಸರವ್ಯಕ್ತಪಡಿಸಿದ್ದಾರೆ. ಸಂಬಳ ಇಲ್ಲದೆ ದೀಪಾವಳಿಯಂತಹ ಸಡಗರದ ಹಬ್ಬವನ್ನೂ ಸಾರಿಗೆ ನೌಕರರು ಆಚರಿಸದಂತಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ಕೂಡಲೇ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Non-remuneration-KSRTC -employees-clue-failure-ruling-government-Dinesh Gundurao-criticizes

ಸಂಪನ್ಮೂಲ ಕ್ರೋಡೀಕರಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು
ಸಾರಿಗೆ ನೌಕರರ ಸಂಬಳ ಆಗದಿರುವುದಕ್ಕೆ ಸಚಿವ ಸವದಿ ಕೋವಿಡ್ ನೆಪ ಹೇಳಿದ್ದಾರೆ. ಕೋವಿಡ್ ಬಿಸಿ ಕೇವಲ ಸಾರಿಗೆ ಇಲಾಖೆಗೆ ಮಾತ್ರ ತಟ್ಟಿಲ್ಲ. ಕೋವಿಡ್ ನೆಪ ಹೇಳುವುದು ಬಿಟ್ಟು ಸಾರಿಗೆ ಇಲಾಖೆ, ಸಂಪನ್ಮೂಲ ಕ್ರೋಡೀಕರಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು. ಈಗ ಹಣಕಾಸು ಇಲಾಖೆ ಕಡೆ ಬೊಟ್ಟು ತೋರಿಸಿದರೆ ಸಾರಿಗೆ ನೌಕರರ ಜೀವನ ನಡೆಯುವುದ್ದೇಗೆ? ಎಂದು ಪ್ರಶ್ನಿಸಿದ್ದಾರೆ.

Non-remuneration-KSRTC -employees-clue-failure-ruling-government-Dinesh Gundurao-criticizes

key words : Non-remuneration-KSRTC -employees-clue-failure-ruling-government-Dinesh Gundurao-criticizes

website developers in mysore