ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ –ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು, ಮೇ 20,2022(www.justkannada.in):  ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಾದ ರಾಮಮುರ್ತಿನಗರದ ನಾಗಪ್ಪ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಕೆರೆ ಪ್ರದೇಶದಲ್ಲಿ ಬಡಾವಣೆಗಳನ್ನು ನಿರ್ಮಿಸುವ ಸಂಬಂಧ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದು ಮಾಡಲಾಗಿದೆ. ಯಾವುದೇ  ಅಧಿಸೂಚಿತ ಕೆರೆ ಪ್ರದೇಶದಗಳ ಮೇಲೆ ಬಡಾವಣೆಗಳನ್ನು ಮಂಜೂರು ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.

ಬೆಂಗಳೂರು ನಗರ, ಯಲಹಂಕ ತಾಲ್ಲೂಕು,ಯಲಹಂಕ ಹೋಬಳಿ, ದೊಡ್ಡಬೆಟ್ಟಹಳ್ಳಿ ಗ್ರಾಮದಲ್ಲಿನ ಜಲಾವೃತ ಪ್ರದೇಶವನ್ನು ವಸತಿ ವಲಯಕ್ಕೆ ಬದಲಾವಣೆ ಮಾಡಲು ಕೋರಿದ್ದ ಮೇರೆಗೆ  ಹೊರಡಿಸಲಾಗಿದ್ದ  ಅಧಿಸೂಚನೆಯನ್ನು ತಕ್ಷಣ ಹಿಂಪಡೆಯಲಾಗಿದೆ ಎಂದು ತಿಳಿಸಿದರು.

Key words: not allowed -build -houses – lake-CM Basavaraja Bommai

ENGLISH SUMMARY…

No permission will be given to construct houses in tank areas: CM Basavaraj Bommai
Bengaluru, May 20, 2022 (www.justkannada.in): Chief Minister Basavaraj Bommai today informed that permission will not be given from now onwards to construct houses near to the places where tanks are located.
He visited several rain-battered areas in Ramamurthynagar in K.R. Puram assembly constituency limits in Bengaluru today and inspected.
Addressing the media persons on the occasion, he informed that the notification concerning construction of layouts near tank areas has been cancelled. “Henceforth no permission will be given for development of layouts near the notified tank areas,” he observed.
He informed that the notification issued for conversion of the rain water covered land located at the Doddbettahalli Village, in Yelahanka Hobli, Yelahanka Taluk, Bengaluru Urban District has been withdrawn.
Keywords: Chief Minister Basavaraj Bommai/ rain-battered areas visit/ layouts/ tank areas/ notification cancelled