ಮನುಷ್ಯತ್ವವೇ ಇಲ್ಲದವರ ಕೈಯಲ್ಲಿ ಅಧಿಕಾರವಿದೆ- ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ದ ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ…

Promotion

ಬೆಂಗಳೂರು,ಫೆ,27,2020(www.justkannada.in):  ದೆಹಲಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ಮನುಷ್ಯತ್ವವೇ ಇಲ್ಲದವರ ಕೈಯಲ್ಲಿ ಅಧಿಕಾರವಿದೆ ಎಂದು ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ದ ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ನಡೆದ ಸಿಎಎ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ. ಅಮಿತ್ ಶಾ ಹೇಳೋದೆಲ್ಲಾ ಸುಳ್ಳು. ಮನುಷ್ಯತ್ವವೇ ಇಲ್ಲದವರ ಕೈಯಲ್ಲಿ ಅಧಿಕಾರವಿದೆ. ದೆಹಲಿ ಹಿಂಸಾಚಾರದಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ. ಮೋದಿ ಮತ್ತು ಅಮಿತ್ ಶಾ ಅತ್ಯಂತ ಕ್ರೂರಿಗಳು. ಸಂವಿಧಾನ ವಿರೋಧಿಗಳು ಎಂದು ಕಿಡಿಕಾರಿದರು.

ಬಿಜೆಪಿಯವರೇ ದೆಹಲಿ ಒಳಗೆ ನುಗ್ಗಿ ಹೊಡೆದರು. ಆದರೆ ಅವರ ಮೇಲೆ ಕೇಸ್ ಹಾಕಲಿಲ್ಲ. ಇನ್ನು ಪ್ರಚೋಧನಾಕಾರಿ ಭಾಷಣ ಮಾಡಿದವರ ವಿರುದ್ದ ಕೇಸ್ ಹಾಕಿದ್ರಾ ಎಂದು ಕೇಳಿದ ನ್ಯಾಯಮೂರ್ತಿಗಳನ್ನೇ  ವರ್ಗಾವಣೆ ಮಾಡಿದ್ದಾರೆ. ಇದು ಅತ್ಯಂತ ಕೆಟ್ಟ ಸರ್ಕಾರ ಎಂದು ಸಿದ್ಧರಾಮಯ್ಯ ಟೀಕಿಸಿದರು.

Key words: not human- Former CM Siddaramaiah – against -Prime Minister Modi -Amit Shah.