ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡದ ಆರೋಪ: ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು…

ರಾಯಚೂರು,ಜೂ,9,2020(www.justkannada.in):  ಸಕಾಲಕ್ಕೆ ಚಿಕಿತ್ಸೆ ನೀಡದ ಹಿನ್ನೆಲೆ ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಯ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿರುವ ಘಟನೆ ರಾಯಚೂರು ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.not-treating-doctors-infant-death-quarantine

ಕೊರೋನಾದಿಂದಾಗಿ ಗರ್ಭಿಣಿ ಮಹಿಳೆ  ರಾಯಚೂರು ಕೋವಿಡ್ ಆಸ್ಪತ್ರೆಯಲ್ಲಿದ್ದರು. ಈ ನಡುವೆ ಗರ್ಭಿಣಿ ಮಹಿಳೆಗೆ ನಿನ್ನೆಯಿಂದ ತೀವ್ರ ರಕ್ತಸ್ರಾವವಾಗಿದೆ. ಆದರೆ ವೈದ್ಯರು ಸಕಾಲದಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಸೋಂಕಿತರು ಊಟವನ್ನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಗೆ ಮಣಿದ ವೈದ್ಯರು ಗರ್ಭಿಣಿಯನ್ನ ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು.

ಆದರೆ ಚಿಕಿತ್ಸೆ ಫಲಿಸದೆ ಮಗು ತಾಯಿ ಹೊಟ್ಟೆಯಲ್ಲೇ ಮೃತಪಟ್ಟಿದೆ. ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ವಹಿಸಿದ್ದೇ ಮಗು ಸಾವನ್ನಪ್ಪಲು ಕಾರಣ ಎಂದು ಸೋಂಕಿತರು ವೈದ್ಯರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: not treating -doctors -Infant -death – quarantine.