ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆ- ಶಿಕ್ಷಣ ಸಚಿವ ಬಿ ಸಿ ನಾಗೇಶ್

ಬೆಂಗಳೂರು, ಆಗಸ್ಟ್ 13,2021(www.justkannada.in):  ಆಗಸ್ಟ್ -ಸೆಪ್ಟೆಂಬರ್ 20 21ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು  ವ್ಯವಸ್ಥಿತವಾಗಿ ಮತ್ತು ದೋಷರಹಿತವಾಗಿ ನಡೆಸಲು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾ ಧಿಕಾರಿಗಳ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು ಈ ಬಗ್ಗೆ ಅಗತ್ಯ ಸಲಹೆ ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

ದಿನಾಂಕ 19-8- 2021 ರಿಂದ 3-9 -2021 ರ ವರೆಗೆ ಈ ಪರೀಕ್ಷೆಗಳು ನಡೆಯಲಿದ್ದು ಈ ಸಂಬಂಧ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ತಮ್ಮ ವಿಧಾನಸೌಧದ ಕಚೇರಿಯಲ್ಲಿ ಸಭೆ ನಡೆಸಿದ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳು ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು.  ರಾಜ್ಯದಲ್ಲಿ ಒಟ್ಟು 5546 ಕಾಲೇಜುಗಳಿಂದ 18414 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.

ಇದಕ್ಕಾಗಿ 187 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಕೇಂದ್ರಗಳಲ್ಲಿ 17-08- 2021 ರ ಒಳಗೆ ಪೂರ್ವಸಿದ್ಧತೆ ಆಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಖಚಿತ ಮಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್ ಪ್ರಕಾರ ಪರೀಕ್ಷೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಆರ್.ಉಮಾಶಂಕರ್,ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರಾದ ಸ್ನೇಹಲ್ ಸೇರಿದಂತೆ ಇಲಾಖೆಯ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ  ವಿಡಿಯೋ ಕಾನ್ಫರೆನ್ಸ್.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿಕಾಸ ಸೌಧದ ದಲ್ಲಿ ಆಯೋಜಿಸಿದ್ದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ಸಚಿವ ಬಿಸಿ ನಾಗೇಶ್,   ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿ ಅವರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಗತ್ಯ ಸಲಹೆ ಸೂಚನೆ ನೀಡಿದರು.

ENGLISH SUMMARY…

District officers informed to prepare for 2nd PUC exams: Education Minister B.C. Nagesh
Bengaluru, August 13, 2021 (www.justkannada.in): Primary and Secondary Education Minister B.C. Nagesh has informed that instructions have been given to the Deputy Commissioners of all the Districts to conduct the second PUC exams systematically and effectively in the months of August-September 2021.

notice-dc-conduct-second-puc-examination-education-minister-b-c-nagesh

Speaking about this today at the Education Department higher-officials meeting held at the Vidhana Soudha today, he informed that the 2nd PUC exams will be held from August 19 to September 9, 2021. He gave instructions to all the Deputy Commissioners to make necessary preparations in this regard. As many as 18414 students will appear for the 2nd PUC exams in 5546 colleges.
About 187 examination centers have been opened and the Deputy Commissioners have been instructed to ensure that all the preparations are completed within August 17, 2021. Prohibitory orders will be imposed within 200 mts distance of the examination centers.
S.R. Umashankar, General Secretary, Education Department, Snehal, Director, PU Education Board and other high-level officers participated in the meeting.
Keywords: Primary and Secondary Education Minister/ B.C. Nagesh/ 2nd PUC exams/ August-September/ from August 19

Key words: Notice – DC-conduct –Second-PUC- examination -Education Minister -B C Nagesh