ದ್ವಿತೀಯ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭಕ್ಕೆ ಸೂಚನೆ: ಉಪನ್ಯಾಸಕರ ಕಡ್ಡಾಯ ಹಾಜರಾತಿ ಆದೇಶ

Promotion

ಬೆಂಗಳೂರು, ಜುಲೈ 07, 2021 (www.justkannada.in): ದ್ವಿತೀಯ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭಕ್ಕೆ ಸೂಚನೆ ನೀಡಲಾಗಿದೆ.

ಈ ಸಂಬಂಧ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಸುತ್ತೋಲೆ ಹೊರಡಿಸಿದ್ದಾರೆ.

ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಜುಲೈ 7ರಿಂದ ಕಡ್ಡಾಯವಾಗಿ ಕಾಲೇಜುಗಳಿಗೆ ಹಾಜರಾಗುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಆದೇಶಿಸಿದ್ದಾರೆ.

ಆನ್ಲೈನ್ ತರಗತಿ ಆರಂಭಿಸಬೇಕಾದ ಹಿನ್ನೆಲೆಯಲ್ಲಿ ಉಪನ್ಯಾಸಕರು ತಮ್ಮ ವಿಷಯದ ವಿದ್ಯಾರ್ಥಿಗಳ ಸಂಪರ್ಕ ಸಂಖ್ಯೆಗಳನ್ನು ಕಡ್ಡಾಯವಾಗಿ ಸಂಗ್ರಹಿಸಿಟ್ಟುಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

Green signal - 6th to 8th –class- school - start –minister –suresh kumar
ಕೃಪೆ-internet