ಮಂಗಳೂರಿಗೆ ಭೇಟಿ ನೀಡದಂತೆ ಸಿದ್ದರಾಮಯ್ಯಗೆ ನೋಟಿಸ್: ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಮಾಜಿ ಸಿಎಂ

kannada t-shirts

ಮಂಗಳೂರು, ಡಿಸೆಂಬರ್ 21, 2019 (www.justkannada.in): ಗಲಭೆಪೀಡಿತ ನಗರಕ್ಕೆ ಭೇಟಿ ನೀಡಲು ಮುಂದಾಗಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಂಗಳೂರು ಪೊಲೀಸ್ ಆಯುಕ್ತರು ನೋಟಿಸ್ ನೀಡಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳೂರಿಗೆ ಇದೇ 22ರ ಮಧ್ಯರಾತ್ರಿವರೆಗೆ ಬರದಂತೆ ಮಂಗಳೂರು ಪೊಲೀಸರು ನೋಟಿಸ್ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ರಾಜ್ಯ, ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ, ರಾಷ್ಟ್ರದಲ್ಲಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲಾಗುತ್ತಿದೆ. ರಾಜ್ಯದ ಪ್ರತಿ ಪಕ್ಷದ ನಾಯಕನಿಗೆ ನಗರಕ್ಕೆ ಆಗಮಿಸದಂತೆ ನೋಟಿಸ್ ನೀಡಿರುವುದು ಖಂಡನೀಯ. ಮಂಗಳೂರಿನಲ್ಲಿ ಗೋಲಿಬಾರ್ ನಡೆಸಿದ್ದು, ರಾಜ್ಯ ಸರಕಾರದ ವಿಫಲತೆ. ಅಮಾಯಕರ ಪ್ರಾಣವನ್ನು ರಾಜ್ಯ ಸರಕಾರ ಬಲಿ ಪಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಎಸ್ ವೈ ಅವರೆ, ಪಿಎಂ ಅವರಿಗೆ ಹೇಳಿ ತುರ್ತು ಪರಿಸ್ಥಿತಿ ಹೇರಿ ನಮ್ಮನ್ನಲ್ಲಿ ಜೈಲಿಗೆ ಹಾಕಿ ನಿಮ್ಮ ಮನಸೋಇಚ್ಛೆ ರಾಜ್ಯಭಾರ ಮಾಡಿ. ನಮ್ಮ ಜನರನ್ನು ನಾವು ಭೇಟಿಯಾಗದಂತೆ ನಿಷೇಧಿಸಿ ಹಿಂಡಿಸಬೇಡಿ. ಪೊಲೀಸರು ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಟ್ವಿಟರ್ ನಲ್ಲಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

website developers in mysore