ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ- ಸಚಿವ ಡಾ.ನಾರಾಯಣಗೌಡ.

Promotion

ಬೆಂಗಳೂರು, ಜುಲೈ,30,2022(www.justkannada.in):  ರೇಷ್ಮೆ ಇಲಾಖೆಯಲ್ಲಿನ  ರೇಷ್ಮೆ ವಿಸ್ತರಣಾಧಿಕಾರಿಗಳ 72 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ಆಗಸ್ಟ್‌ 10 ರಿಂದ ಸೆಪ್ಟೆಂಬರ್‌ 9 ರ ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ,  ಪ್ರವರ್ಗ 2 ಎ,ಬಿ, 3 ಎ, ಬಿ 300 ರೂ. ಮಾಜಿ ಸೈನಿಕರಿಗೆ 50 ರೂ ಶುಲ್ಕ ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ 1 ಹಾಗೂ ವಿಕಲಾಂಗ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ನೀಡಲಾಗಿದೆ.

ರೇಷ್ಮೆ ಇಲಾಖೆಯ ಯೋಜನೆಗಳನ್ನು ಸಮರ್ಥವಾಗಿ ಜಾರಿಗೊಳಿಸಲಾಗಿದೆ. ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಿಬ್ಬಂದಿ ಕೊರತೆ ಇರುವುದು ಕಂಡು ಬಂದಿತ್ತು. ಜೊತೆಗೆ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಸಿಬ್ಬಂದಿ ಕೊರತೆಯ ಬಗ್ಗೆ ರೈತರು ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿ ನೇಮಕಕ್ಕೆ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ 72 ರೇಷ್ಮೆ ವಿಸ್ತರಣಾಧಿಕಾರಿಗಳ ಹುದ್ದೆ ಭರ್ತಿ ಮಾಡಿಕೊಳ್ಳಲಿದ್ದು, ಇದರ ಜೊತೆಗೆ ಮುಂದಿನ ದಿನಗಳಲ್ಲಿ ಇಲಾಖೆಯ ವಿವಿಧ ವೃಂದದಲ್ಲಿ ಖಾಲಿ ಇರುವ 500 ಕ್ಕೂ ಹೆಚ್ಚು ಹುದ್ದೆಗಳ  ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Notification – Recruitment – Silk -Extension -Officer –Posts-Minister -Dr. Narayana Gowda