ದೇಶದಲ್ಲಿ ಒಂದೇ ದಿನ 10 ಸಾವಿರ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ….

number-coronavirus-infections-crossing-10000-borders-single-day
Promotion

ನವದೆಹಲಿ,ಜೂ,12,2020(www.justkannada.in):  ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗಿತ್ತಿದ್ದು ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದೆ.

ಒಂದೇ ದಿನ 10,956 ಮಂದಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 2.97,535ಕ್ಕೆ ಏರಿಕೆಯಾಗಿದೆ. ಲಾಕ್’ಡೌನ್ ಸಡಿಲಗೊಳಿಸಿದ ಬೆನ್ನಲ್ಲೇ ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇಇದೆ.number-coronavirus-infections-crossing-10000-borders-single-day

ಕಳೆದ 24 ಗಂಟೆಯಲ್ಲಿ 396 ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದು ಈವರೆಗೆ ಒಟ್ಟು ದೇಶದಲ್ಲಿ 8498 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. 1,47,195 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 1,41,842  ಮಂದಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Key words: number –coronavirus- infections- crossing -10,000 borders – single day