ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯ ಬಗ್ಗೆ ಕನಿಷ್ಠ ಜ್ಞಾನ ಹೊಂದಿರಬೇಕು : ಸಚಿವ ಜೆ.ಸಿ.ಮಾಧುಸ್ವಾಮಿ

ತುಮಕೂರು,ಏಪ್ರಿಲ್,13,2021(www.justkannada.in) : ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯ ಬಗ್ಗೆ ಕನಿಷ್ಠ ಜ್ಞಾನ ಹೊಂದಿರಬೇಕು. ಈ ಬಗ್ಗೆ ಕೆಡಿಪಿ ಸಭೆಗೆ ಸಮರ್ಪಕ ಮಾಹಿತಿ ಒದಗಿಸಬೇಕು. ಜಿಲ್ಲೆಯಲ್ಲಿ ನರೇಗಾದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದಿಂದ ಕೈಗೊಂಡ ಕಾಮಗಾರಿಗಳು ಪ್ರಗತಿಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.Agriculture,Pumpset,Adequate,Electricity,giving,Ask,Protest ಚಿಕ್ಕನಾಯಕನಹಳ್ಳಿ ಸೇರಿದಂತೆ ಜಿಲ್ಲೆಯ ಯಾವ ತಾಲ್ಲೂಕಿನಲ್ಲೂ ಗ್ರಾಮ ವಿಕಾಸ ಯೋಜನೆ ಪ್ರಗತಿ ಕಂಡಿಲ್ಲ. ಹಾಗಾಗಿ, ಯೋಜನೆಗೆ ಮೀಸಲಾಗಿರುವ ಪೂರ್ಣ ಪ್ರಮಾಣದ ಅನುದಾನ ಬಳಸಿ ಗುರಿ ಸಾಧಿಸಬೇಕು ಎಂದರು.

ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರಿಗೆ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ನರೇಗಾ ಯೋಜನೆಯಡಿ ನೀರಿನ ತೊಟ್ಟಿಗಳನ್ನು ನಿರ್ಮಿಸಿ ನೀರು ಪೂರೈಕೆ ಮಾಡಬೇಕು ಎಂದು ಹೇಳಿದರು.

Officers-Jurisdiction-About-At least-Knowledge-Must have-Minister-J.C.Madhuswamy

ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳು ತಾಲ್ಲೂಕುವಾರು ಜಿಲ್ಲಾ ಅಭಿವೃದ್ಧಿಗೆ ಪೂರಕವಾದ ಮ್ಯಾಪಿಂಗ್ ರೂಪರೇಷೆ ತಯಾರಿಸಬೇಕು. ಇದರಿಂದ ಆದ್ಯತೆ ಮೇರೆಗೆ ಅಭಿವೃದ್ಧಿ ಕಾಮಗಾರಿಗೆ ಒತ್ತು ಕೊಡಲು ಸುಲಭ ಸಾಧ್ಯವಾಗುತ್ತದೆ. ಮುಂದಿನ ಕೆಡಿಪಿ ಸಭೆಯೊಳಗೆ ಮ್ಯಾಪಿಂಗ್ ತಯಾರಿಸುವಂತೆ ತಿಳಿಸಿದರು.

key words : Officers-Jurisdiction-About-At least-Knowledge-Must have-Minister-J.C.Madhuswamy