ಶಕ್ತಿ ಯೋಜನೆ ಜಾರಿಗೊಳಿಸಿ ಸರ್ಕಾರದಿಂದ ಅಧಿಕೃತ ಆದೇಶ.

Promotion

ಬೆಂಗಳೂರು,ಜೂನ್,5,2023(www.justkannada.in):  ಕೆಎಸ್ ​ಆರ್ ​ಟಿಸಿ ಬಸ್ ​ಗಳಲ್ಲಿ  ಮಹಿಳೆಯರ ಉಚಿತ ಪ್ರಯಾಣಕ್ಕೆ  ಅವಕಾಶ ನೀಡುವ ‘ಶಕ್ತಿ’ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರದ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.

ಆದೇಶದ ಪ್ರಕಾರ  ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್​​ಕಾರ್ಡ್’  ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌ ಕಾರ್ಡ್‌ ಗಳನ್ನು ಪಡೆಯಬಹುದು. ಕಾರ್ಡ್ ​​ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ರಾಜ್ಯ ಸರ್ಕಾರ ತಿಳಿಸಿದೆ.

ಶಕ್ತಿ ಸ್ಮಾರ್ಟ್‌ಕಾರ್ಡ್‌ ಅನ್ನು ವಿತರಿಸುವವರೆಗೆ ಭಾರತ ಸರ್ಕಾರ/ ಕರ್ನಾಟಕ ಸರ್ಕಾರದ ಇಲಾಖೆ / ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಉಚಿತ ಟಿಕೆಟ್‌ ವಿತರಿಸುವ ಸ೦ದರ್ಭದಲ್ಲಿ ಪರಿಗಣಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಜೂನ್​ 2ರಂದು ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಯ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದರು. ಶಕ್ತಿ’ ಯೋಜನೆಯನ್ನು ಜೂನ್ 11ರಿಂದ ಆರಂಭ ಮಾಡಲಾಗುವುದು ಎಂದು ಅವರು ಹೇಳಿದ್ದರು. ಇದೀಗ ಶಕ್ತಿ ಯೋಜನೆ ಸಂಬಂಧ ಅಧಿಕೃತ ಆದೇಶವನ್ನು ಸರ್ಕಾರ ಹೊರಡಿಸಿದೆ.

Key words: Official order – Govt – implement -Shakti Yojana