ಎಚ್ಚೆತ್ತ ಸರಕಾರ: ರಾಜ ಕಾಲುವೆ ಒತ್ತುವರಿ ತೆರವಿಗೆ ನೋಟಿಸ್ ನೀಡಲು ಆರಂಭಿಸಿದ ಅಧಿಕಾರಿಗಳು

Promotion

ಬೆಂಗಳೂರು, ಸೆಪ್ಟೆಂಬರ್ 11, 2022 (www.justkannada.in): ಒತ್ತುವರಿ ತೆರವಿಗಾಗಿ ಬೆಂಗಳೂರಿನ ರೈನ್​ಬೋ ಡ್ರೈವ್​ ಲೇಔಟ್ ವಿಲ್ಲಾಗಳಿಗೆ ಬೆಂಗಳೂರು ಪೂರ್ವ ತಹಶೀಲ್ದಾರ್ ನೋಟಿಸ್ ಜಾರಿ ಮಾಡಿದ್ದಾರೆ.

ರೈನ್​ಬೋ ಡ್ರೈವ್ ಲೇಔಟ್​​ನಲ್ಲಿ ಜಿಲ್ಲಾಡಳಿತ ಸರ್ವೆ ನಡೆಸಿದ್ದು, ಕಾಲುವೆ ಒತ್ತುವರಿ ಮಾಡಿ ವಿಲ್ಲಾಗಳನ್ನ ನಿರ್ಮಿಸಿರುವುದು ಬಹಿರಂಗವಾಗಿದೆ. ಮಳೆ ಅವಾಂತರದ ಬಳಿಕ ತೆರವಿಗೆ ಸರಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಆರಂಭಿಸಿದೆ.

ಒತ್ತುವರಿ ತೆರವು ಮಾಡದಿದ್ದ ನಾವೇ ಮಾಡುತ್ತೇವೆ. ತೆರವು ಕಾರ್ಯಾಚರಣೆ ವೆಚ್ಚ ನೀವೇ ಭರಿಸಬೇಕೆಂದು 15ಕ್ಕೂ ಹೆಚ್ಚು ವಿಲ್ಲಾಗಳಿಗೆ ತಹಶೀಲ್ದಾರ್​ ನೋಟಿಸ್​ ಜಾರಿಗೊಳಿಸಿದ್ದಾರೆ.