ಒಮಿಕ್ರಾನ್ ಭೀತಿ ಹಿನ್ನೆಲೆ: ರಾಜ್ಯದಲ್ಲಿ ಶಾಲೆ ಬಂದ್  ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ ನೀಡಿದ್ದು ಹೀಗೆ.  

Promotion

ಬೆಂಗಳೂರು,ಡಿಸೆಂಬರ್,9,2021(www.justkannada.in):  ರಾಜ್ಯದಲ್ಲಿ ಒಮಿಕ್ರಾನ್ ಭೀತಿ ಹಿನ್ನೆಲೆ ಶಾಲೆಗಳನ್ನ ಸರ್ಕಾರ ಬಂದ್ ಮಾಡುತ್ತದೆಯೇ ಎಂಬುದಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ಶಾಲೆ ಮುಚ್ಚುವಷ್ಟು ಗಂಭೀರ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ . ಹೀಗಾಗಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ  ಶಾಲೆ ಬಂದ್ ಮಾಡಲ್ಲ. ವಸತಿ ಶಾಲೆಗಳಲ್ಲಿ ಸೋಂಕು ತಡೆಗೆ ಕ್ರಮ ಕೈಗೊಳ್ಳಲಾಗುತ್ತದೆ.  ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದರು.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ರಾಜ್ಯದಲ್ಲಿ 1 ರಿಂದ 10ನೇ ತರಗತಿ ಮಕ್ಕಳಿಗೆ ಕೊರೋನ ಬಂದಿಲ್ಲ. ಶಾಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ  ತಜ್ಞರು ಸೂಚಿಸಿದ್ದಾರೆ. ಶಾಲೆಗಳಿಗೆ ಹೊಸದಾಗಿ ಯಾವುದೇ ಮಾರ್ಗಸೂಚಿ ಇರುವುದಿಲ್ಲ, ಈ ಹಿಂದೆ ಇದ್ದ ಮಾರ್ಗಸೂಚಿಗಳೇ ಮುಂದುವರೆಯುತ್ತವೆ. ನಾವು ಕೇವಲ ಜಾಗೃತಿ ಮೂಡಿಸಬಹುದು ಹೊರತು 2 ಡೋಸ್ ಲಸಿಕೆ ಪಡೆಯದಿದ್ದರೆ ಶಾಲೆಗೆ ಪ್ರವೇಶವೇ ಇಲ್ಲ ಎಂದು ನಿಯಮ ಜಾರಿಗೆ ತರಲು ಸಾಧ್ಯವಿಲ್ಲ ಎಂದು ತಿಳಿಸಿದರು.

ರಾಜ್ಯದ ಕೆಲ ಹಾಸ್ಟೆಲ್ ಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸ್ಟೆಲ್ ಗಳಿಗೆ ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಜಂಟಿ ಸಮಿತಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಧ್ಯಕ್ಕೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡಬೇಕೆಂಬ ಗಂಭೀರ ಪರಿಸ್ಥಿತಿ ಇಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಈವರೆಗೆ 172 ಶಿಕ್ಷಕ ಹಾಗೂ ಮಕ್ಕಳಿಗೆ ಕೊರೊನಾ ಸೋಂಕು ತಗುಲಿತ್ತು. ಅವರಲ್ಲಿ 100 ಜನರು ಚೇತರಿಸಿಕೊಂಡಿದ್ದಾರೆ. ಶಾಲೆಗಳಲ್ಲಿ ಎಲ್ಲಾ ಕಡೆ ಮಕ್ಕಳ ಹಾಜರಾತಿ ಕೂಡ ಇದೆ. ವಸತಿ ಶಾಲೆ ಹಾಗೂ ಹಾಸ್ಟೆಲ್ ಗಳಲ್ಲಿ ವಿಶೇಷವಾಗಿ ಗಮನ ಹರಿಸಲಾಗುತ್ತದೆ ಎಂದರು.

Key words: Omicron – Education Minister -BC Nagesh – clear -about -school bandh