ಒಂದು ರಾಷ್ಟ್ರ ಒಂದು ಚುನಾವಣೆಗೆ ನಡೆಸಲು ಸನ್ನದ್ಧವಾಗಿದ್ದೇವೆ ಎಂದ ಮುಖ್ಯಚುನಾವಣಾ ಆಯುಕ್ತ ಸುಶೀಲ್ ಚಂದ್ರ

Promotion

ಬೆಂಗಳೂರು, ಮಾರ್ಚ್ 10, 2022 (www.justkannada.in): ಒಂದು ರಾಷ್ಟ್ರ ಒಂದು ಚುನಾವಣೆ ಉತ್ತಮ ಸಲಹೆಯಾಗಿದೆ, ಆದರೆ ಇದಕ್ಕೆ ಸಂವಿಧಾನದಲ್ಲಿ ಬದಲಾವಣೆಯ ಅಗತ್ಯವಿದೆ ಮತ್ತು ಅದನ್ನು ಸಂಸತ್ತಿನಲ್ಲಿ ನಿರ್ಧರಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ತಿಳಿಸಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಕೂಡ ಸಂಪೂರ್ಣ ಸನ್ನದ್ಧವಾಗಿದ್ದು, ಏಕಕಾಲದಲ್ಲಿ ಚುನಾವಣೆ ನಡೆಸಲು ಸಮರ್ಥವಾಗಿದೆ ಎಂದು ಹೇಳಿದ್ದಾರೆ.

ಸಂವಿಧಾನದ ಪ್ರಕಾರ ಎಲ್ಲ ಚುನಾವಣೆಗಳು ಏಕಕಾಲಕ್ಕೆ ನಡೆಯಬೇಕು.ಸ್ವಾತಂತ್ರ್ಯ ಬಂದಾಗಿನಿಂದ ನಡೆಯುತ್ತಿರುವ ಸಂಸತ್ ಚುನಾವಣೆಗಳು ಮೂರೂ ಚುನಾವಣೆಗಳು ಏಕಕಾಲಕ್ಕೆ ನಡೆಯುತ್ತವೆ. ನಂತರವೇ ಕೆಲವೊಮ್ಮೆ ವಿಧಾನಸಭೆ ವಿಸರ್ಜನೆಯಿಂದಾಗಿ ವೇಳಾಪಟ್ಟಿ ಬದಲಾಗುತ್ತವೆ.ಒಂದು ರಾಷ್ಟ್ರ ಒಂದು ಚುನಾವಣೆ ಉತ್ತಮ ಸಲಹೆಯಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

ಚುನಾವಣಾ ಆಯೋಗ ಸಂಪೂರ್ಣವಾಗಿ ಸಿದ್ಧವಾಗಿದೆ. ಚುನಾವಣಾ ಆಯೋಗವು ಎಲ್ಲಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಾಮರ್ಥ್ಯವನ್ನು ಹೊಂದಿದೆ ಮತ್ತು 5 ವರ್ಷಗಳಿಗೊಮ್ಮೆ ಮಾತ್ರ ಆಯ್ಕೆ ಮಾಡಲು ಸಿದ್ಧವಾಗಿದೆ ಎಂದಿದ್ದಾರೆ.