ಕೆಆರ್ ಎಸ್ ಜಲಾಶಯ ಭರ್ತಿಗೆ ಇನ್ನ 3 ಅಡಿ ಮಾತ್ರ ಬಾಕಿ.

ಮಂಡ್ಯ,ಜುಲೈ,9,2022(www.justkannada.in):  ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ಧು ಮಳೆರಾಯನ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ವರುಣನ ಆರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ ರಾಜ್ಯದಲ್ಲಿನ ಹಲವು ಡ್ಯಾಂಗಳು ಭರ್ತಿಯತ್ತ ಸಾಗಿದ್ದು ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.

ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆಯೇ ಕೊಡಗಿನಲ್ಲೂ ಭಾರಿ ಮಳೆಯಿಂದಾಗಿ ಹಲವೆಡೆ ಗುಡ್ಡಕುಸಿತ ಉಂಟಾಗಿದೆ. ಇನ್ನು ನಿರಂತರ ವರುಣ ಅಬ್ಬರಿಸುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯ ಭರ್ತಿಗೆ ಇನ್ನ ಕೇವಲ ಮೂರು ಅಡಿ ಮಾತ್ರ ಬಾಕಿ ಇದೆ.

ಕೆಆರ್ ಎಸ್ ನಲ್ಲಿ 44.873 ಟಿಎಂಸಿ ನೀರು ಸಂಗ್ರಹವಾಗಿದ್ದು, ಮೂರು ದಿನಗಳಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ. ಹೀಗಾಗಿ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆ ನೀಡಲಾಗಿದ್ದು,  ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ  ಸೂಚನೆ ನೀಡಲಾಗಿದೆ.

Key words: Only- 3 feet -left – fill –KRS- Dam-rain