ಮೈಸೂರಿನಲ್ಲಿ 2 ನೇ ಕೋವಿಡ್ ಆಸ್ಪತ್ರೆ ಆರಂಭಕ್ಕೆ ಸಜ್ಜು…

ಮೈಸೂರು,ಜೂ,27,2020(www.justkannada.in): ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರು ಹೆಚ್ಚಳವಾಗುತ್ತಿರುವ  ಹಿನ್ನೆಲೆ. ಮೈಸೂರಿನಲ್ಲಿ 2 ನೇ ಕೋವಿಡ್ ಆಸ್ಪತ್ರೆ ಆರಂಭಕ್ಕೆ ಸಜ್ಜುಗೊಳಿಸಲಾಗಿದೆ.

ಮೈಸೂರಿನಲ್ಲಿ ಇನ್ನು ಉದ್ಘಾಟನೆಯಾಗದ ತಾಯಿ ಮಕ್ಕಳ ಆಸ್ಪತ್ರೆಯನ್ನ ಕೋವಿಡ್ ಆಸ್ಪತ್ರೆಯನ್ನಾಗಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಸಂಸದ ಪ್ರತಾಪ್ ಸಿಂಹ ಇಂದು ತುಳಸಿ ದಾಸಪ್ಪ ತಾಯಿ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.opening - 2nd Kovid Hospital – Mysore-MP –Prathap simha

ಬಳಿಕ ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ತಾಯಿಮಕ್ಕಳ ಆಸ್ಪತ್ರೆ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಆಸ್ಪತ್ರೆಯನ್ನು ಬಳಸಿಕೊಳ್ಳಲು ಚಿಂತನೆ ಮಾಡಲಾಗಿದೆ. ತ್ವರಿತವಾಗಿ ಕಾಮಗಾರಿ ಮುಗಿಸಲು ಸೂಚನೆ ನೀಡಲಾಗಿದೆ. ಇದು ಕೇಂದ್ರ ಸರ್ಕಾರ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಆಸ್ಪತ್ರೆಯಾಗಿದೆ. ಹಾಗಾಗಿ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಎಂದು ಹೇಳಿದರು.

Key words: opening – 2nd Kovid Hospital – Mysore-MP –Prathap simha