ಅಪರೇಷನ್ ಕಮಲಕ್ಕಾಗಿ ಅಮಿಷ ಪ್ರಕರಣ: ಸಿಎಂ ಬಿಎಸ್ ವೈ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು…

Promotion

 ಬೆಂಗಳೂರು,ಮಾರ್ಚ್,31,2021(www.justkannada.in): ಅಪರೇಷನ್ ಕಮಲಕ್ಕಾಗಿ ಅಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ತನಿಖೆ ನಡೆಸಲು ಹೈಕೋರ್ಟ್ ಸಮ್ಮತಿ ಸೂಚಿಸಿದೆ.Government,Social,Economic,Educational,survey,Report,Should,receive,Former CM,Siddaramaiah 

ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲು ಹಿನ್ನೆಲೆ ಎಫ್ ಐಆರ್ ಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್, ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ತನಿಖೆಗೆ ಅಸ್ತು ಎಂದಿದೆ.

ಜೆಡಿಎಸ್ ಬಿಟ್ಟು ಬಿಜೆಪಿಗೆ ಬರುವಂತೆ ಅಮಿಷ ಒಡ್ಡಲಾಗಿದೆ ಎಂದು ಆರೋಪಿಸಿ ಶಾಸಕ ನಾಗನಗೌಡ ಪುತ್ರ ಶರಣಗೌಡ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ, ಶಿವನಗೌಡ ನಾಯಕ್, ಶಾಸಕ ಪ್ರೀತಂಗೌಡ, ಎಂ.ಬಿ ಮರಮಕಲ್ ವಿರುದ್ದ ಮೊಕದ್ದಮೆ ದಾಖಲಾಗಿತ್ತು.Operation kamala- case –Highcourt-  probe- against -CM BS yeddyurappa

ಪ್ರಕರಣವನ್ನ ರದ್ದು ಕೋರಿ ಸಿಎಂ ಬಿಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಈ ಮಧ್ಯೆ ಎಫ್ ಐಆರ್ ಗೆ ತಡೆಯಾಜ್ಞೆ ನೀಡಲಾಗಿತ್ತು. ಇದೀಗ ಎಫ್ ಐಆರ್ ತಡೆಯಾಜ್ಞೆ ತೆರವುಗೊಳಿಸಿರುವ ಹೈಕೋರ್ಟ್,   ತನಿಖೆಗೆ ಸಮ್ಮತಿ ಸೂಚಿಸಿದೆ.

Key words: Operation kamala- case –Highcourt-  probe- against -CM BS yeddyurappa