ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹಕ್ಕೆ ವಿರೋಧ: ಕೇಂದ್ರ, ರಾಜ್ಯ ಸರ್ಕಾರದ ವಿರುದ‍್ಧ ಪ್ರತಿಭಟನೆ, ಆಕ್ರೋಶ.

Promotion

ರಾಮನಗರ,ಮಾರ್ಚ್,14,2023(www.justkannada.in): ಬೆಂಗಳೂರು ಮೈಸೂರು ದಶಪಥ ಹೆದ್ದಾರಿಗೆ ಕಳೆದ ಎರಡು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಇಂದಿನಿಂಧ  ಎಕ್ಸ್‌ ಪ್ರೆಸ್‌ ವೇನಲ್ಲಿ ಟೋಲ್ ಸಂಗ್ರಹ ಆರಂಭವಾಗಿದೆ.

ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಹಾಗೂ ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ. ಆದರೆ ಟೋಲ್ ಸಂಗ್ರಹಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಯುತ್ತಿದೆ

ಎಕ್ಸ್ ಪ್ರೆಸ್ ಹೈವೇಯಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಟೋಲ್ ಗೇಟ್ ಮುರಿದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಸಿದರು. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಕಾಂಗ್ರೆಸ್ ಕಾರ್ಯಕರ್ತತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್​​ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ಟ್ರಾಫಿಕ್​ ಜಾಮ್​​ ಉಂಟಾಗಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಕೆ ಬಳಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು,  ಈ ವೇಳೆ ಟೋಲ್ ಪ್ಲಾಜಾ ಕಂಬಿ ಮುರಿದು ಕನ್ನಡಪರ ಸಂಘಟನೆ ಸದಸ್ಯರೊಬ್ಬರು ಆಕ್ರೋಶ ಹೊರ ಹಾಕಿದ್ದಾರೆ. ಟೋಲ್ ಕಂಬಿ ಮುರಿದ ಸದಸ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟೋಲ್ ಸಂಗ್ರಹ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ  ವಕೀಲರ ಸಂಘದ ಮಾಜಿ ಅಧ್ಯಕ್ಷ ರಂಗನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.  ಕಣಮಿಣಿಕೆ ಗ್ರಾಮದ ಬಳಿಯ ಟೋಲ್ ಪ್ಲಾಜಾ ಎದುರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

Key words:  Opposition- Bangalore-Mysore- highway -toll –collection-protest