ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ವಿರೋಧ: ಕೊಡಗು, ಕಲ್ಬುರ್ಗಿ, ಕೋಲಾರ ಸೇರಿ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ…

ಕಲ್ಬುರ್ಗಿ/ಕೋಲಾರ,ಡಿ,23,2019(www.justkannada.in):  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಲ್ಬುರ್ಗಿ, ಕೋಲಾರ , ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಕಲಬುರುಗಿ ಚಿಂಚೋಳಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ 50 ಮಂದಿಯನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ. ಹಾಗೆಯೇ ರಾಮನಗರ ಕನಕಪುರದಲ್ಲಿ ಮುಸ್ಲೀಂ ಸಮುದಾಯದ ವತಿಯಿಂದ ಕಾಯ್ದೆ ವಿರೋಧಿಸಿ ಧರಣಿ ನಡೆಸಲಾಗುತ್ತಿದೆ.

ಹಾಗೆಯೇ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೋಲಾರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಪ್ರಗತಿಪರರು ಸಂಘಟನೆಗಳು ಭಾಗಿಯಾಘಿವೆ.  ಅಮ್ಮವಾರಿ ಪೇಟೆ ವೃತ್ತದಲ್ಲಿ ಟಿಪ್ಪು ಸುಲ್ತಾನ್, ಮಹಾತ್ಮ ಗಾಂಧಿ ಅಂಬೇಡ್ಕರ್ ಫೋಟೋ ಹಿಡಿದು ಪ್ರತಿಭಟನಾಕಾರರು ಧರಣಿ ನಡೆಸುತ್ತಿದ್ದಾರೆ.

ಈ ಮಧ್ಯೆ ಧಾರವಾಡದಲ್ಲೂ  ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದ್ದು  ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.  ಜಿಲ್ಲಾಧೀಕಾರಿಗಳ ಮೂಲಕ ರಾಜ್ಯಪಾಲರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದ್ದಾರೆ. ಇನ್ನು ಕೊಡಗು ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದು ಎನ್ ಆರ್ ಸಿ ಮತ್ತು ಸಿಎಎ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

Key words: Opposition – Citizenship Amendment Act- Protest – districts –Kodagu- Kalburgi – Kolar.