ಮರಾಠ ಅಭಿವೃದ್ಧಿ ನಿಗಮಕ್ಕೆ ವಿರೋಧ: ಪ್ರತಿಭಟನಾನಿರತ ವಾಟಾಳ್ ನಾಗರಾಜ್ ಸೇರಿ ಹಲವರು ಪೊಲೀಸರ ವಶಕ್ಕೆ…

ಬೆಂಗಳೂರು,ಡಿಸೆಂಬರ್,5,2020(www.justkannada.in):  ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ಕಾವು ಹೆಚ್ಚಾಗಿದ್ದು, ಈ ಮಧ್ಯೆ ಟೌನ್ ಹಾಲ್ ಬಳಿ ರ್ಯಾಲಿಗೆ ಮುಂದಾಗಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿ ಹಲವು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.logo-justkannada-mysore

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ರಾಜ್ಯದ ಹಲವೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಈ ಮಧ್ಯೆ ರಾಜ್ಯ ರಾಜಧಾನಿ ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಬೆಳಿಗ್ಗೆಯಿಂದಲೇ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ  ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಈ ನಡುವೆ ಟೌನ್ ಹಾಲ್ ಮುಂಭಾಗ ಕನ್ನಡಪರ ಹೋರಾಟಗಾರ  ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತಯರು ಪ್ರತಿಭಟನಾ ರ್ಯಾಲಿಗೆ ಮುಂದಾಗಿದ್ದು ಈ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಸಾ.ರಾ ಗೋವಿಂದು ಸೇರಿ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Key words: Opposition – Maratha Development Corporation-protest-Vatal Nagaraj – activitist-arrest