ದೇವನಹಳ್ಳಿಯನ್ನು ಜಿಲ್ಲಾಕೇಂದ್ರವಾಗಿಸಿ ಒಂದು ತಿಂಗಳೊಳಗೆ ಆದೇಶ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು,ಆಗಸ್ಟ್,15,2022(www.justkannada.in):  ದೇವನಹಳ್ಳಿಯನ್ನು ಜಿಲ್ಲಾಕೇಂದ್ರವಾಗಿಸಿ ಒಂದು ತಿಂಗಳೊಳಗೆ ಆದೇಶ ಹೊರಡಿಸಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌  ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದ ಸಚಿವ ಸುಧಾಕರ್,  ದೇವನಹಳ್ಳಿಯು ನಾಡಪ್ರಭು ಕೆಂಪೇಗೌಡರು ಆಡಳಿತ ನಡೆಸಿದ ಪ್ರದೇಶ. 54 ಪೇಟೆಗಳು, 340 ಕ್ಕೂ ಅಧಿಕ ಕೆರೆಗಳ ನಿರ್ಮಾಣ, ಪರಿಸರ ಸಂರಕ್ಷಣೆ ಮೊದಲಾದ ಮಹತ್ವದ ಕ್ರಮಗಳನ್ನು ಅವರು ಜಾರಿ ಮಾಡಿದ್ದರು. ಅವರ ಆಡಳಿತದ ನಾಡಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿರುವುದು ಹೆಮ್ಮೆ ತಂದಿದೆ. ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿಸಲು ಒಂದು ತಿಂಗಳೊಳಗೆ ಆದೇಶ ಹೊರಡಿಸಲಾಗುವುದು ಎಂದರು.

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ನಿರ್ಮಾಣವಾಗಲಿದ್ದು, ಎರಡು ತಿಂಗಳಲ್ಲಿ ಭೂಮಿ ಪೂಜೆ ನಡೆಯಲಿದೆ. ಹೊಸಕೋಟೆಯಲ್ಲಿ ತಾಯಿ ಮತ್ತು ಶಿಶು ಆಸ್ಪತ್ರೆ ಕಾಮಗಾರಿ ಕೂಡ ಆರಂಭವಾಗಲಿದೆ. ನೆಲಮಂಗಲದಲ್ಲಿ ಕೂಡ ಆಸ್ಪತ್ರೆ ನಿರ್ಮಾಣವಾಗಲಿದೆ. ವಿರೋಧ ಕೇಳಿಬಂದರೆ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುವುದಿಲ್ಲ. ಈ ಭಾಗದಲ್ಲಿ ಕೈಗಾರಿಕಾಭಿವೃದ್ಧಿ ಆಗಲಿದೆ ಎಂದರು.

ಎತ್ತಿನಹೊಳೆ ಯೋಜನೆಯಡಿ ಒಂದು ವರ್ಷದೊಳಗೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದರು.

Key words: Order – Devanahalli -district -headquarters -within – month-Minister- Dr. K. Sudhakar.