ಸಮಗ್ರ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: 10 ಲಕ್ಷ ಉದ್ಯೋಗ ಸೃಷ್ಠಿಗೆ ಕ್ರಮ- ಸಿಎಂ ಬಸವರಾಜ ಬೊಮ್ಮಾಯಿ.

Promotion

ಬೆಂಗಳೂರು,ಅಕ್ಟೋಬರ್,7,2022(www.justkannada.in): ಸಮಗ್ರ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಠಿಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ಜನತೆಗಾಗಿ ಹಲವು ಯೋಜನೆಗಳನ್ನ ರೂಪಿಸಲಾಗಿದೆ. ಕಾರವಾರದಲ್ಲಿ ಬಂದರು ನಿರ್ಮಾಣಕ್ಕೆ 280 ಕೋಟಿ ಅನುದಾನ ದಾವಣಗೆರೆ, ಶಿವಮೊಗ್ಗ, ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ, ದಿಂಬು ಹಾಸಿಗೆಯಲ್ಲಿ ಕಾಂಗ್ರೆಸ್ ಭ್ರಷ್ಟಾಚಾರ ಮಾಡಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ದೇಶದ ಭ್ರಷ್ಟಾಚಾರ ಪಕ್ಷ ಅಂದ್ರೆ ಕಾಂಗ್ರೆಸ್. ಪಾಪದ ನೆಲೆಗಟ್ಟಿನಲ್ಲಿ ಹುಟ್ಟಿದ ಸಮ್ಮಿಶ್ರ ಸರ್ಕಾರ ಉಳಿಯಲಿಲ್ಲ ಎಂದು ಟೀಕಿಸಿದರು.

Key words: Our government – comprehensive- development-10 lakh- job -creation- CM Basavaraja Bommai.