ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸಲು ನಾನು ಮತ್ತು ನಮ್ಮ ಸರ್ಕಾರ ಸದಾ ಸಿದ್ಧ- ಸಚಿವ ಶ್ರೀರಾಮುಲು ಭರವಸೆ…

ಬೆಂಗಳೂರು,ಜ,3,2019(www.justkannada.in): ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಸದಾ ಸ್ಪಂದಿಸಲು ನಾನು ಮತ್ತು ನಮ್ಮ ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.

ವೇತನ ಹೆಚ್ಚಳ ಪ್ರೋತ್ಸಹಧನ ಬಿಡುಗಡೆ ಸೇರಿ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ಆಶಾಕಾರ್ಯಕರ್ತೆಯರು ಬೃಹತ್ ಪ್ರತಿಭಟನಾ ರ್ಯಾಲಿ  ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳಿಗೆ ಮಾತನಡಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು, ಆಶಾ ಕಾರ್ಯಕರ್ತರ ಪ್ರತಿಭಟನೆ ಪೂರ್ವ ನಿಗದಿಯಾಗಿತ್ತು. ಹೀಗಾಗಿ ಪ್ರತಿಭಟನೆ ಮಾಡ್ತಿದ್ದಾರೆ. ಮೂರು ದಿನಗಳ ಹಿಂದೆಯೇ ಸಭೆ ಮಾಡಲಾಗಿದೆ. ಆಶಾ ಕಾರ್ಯಕರ್ತರು 10 ಬೇಡಿಕೆ ಇಟ್ಟಿದ್ದಾರೆ. ಅದರಲ್ಲಿ ನಾವು ಇಲಾಖೆ ಅಧಿಕಾರಿಗಳುಲ ಜೊತೆ ಸಭೆ ಮಾಡಿ 7 ಬೇಡಿಕೆ ಈಡೇರಿಸಿದ್ದೇನೆ. ಆಶಾ ಕಾರ್ಯಕರ್ತರು ರಾಜ್ಯದಲ್ಲಿ ಉತ್ತಮ ಕೆಲಸ ಮಾಡ್ತಿದ್ದಾರೆ. ಆಶಾ ಕಾರ್ಯಕರ್ತೆಯರು ತಾಯಂದಿರ ರೀತಿ‌. ಅವರ ಬೇಡಿಕೆಗೆ ನಾನು ನಮ್ಮ ಸರ್ಕಾರ ಸದಾ ಸ್ಪಂದಿಸಲು ಸಿದ್ಧ ಎಂದ ಭರವಸೆ ನೀಡಿದರು.

ಆಯುಷ್ಮಾನ್ ಭಾರತ ಯೋಜನೆಯಡಿ ಬಿಪಿಎಲ್ ಕಾರ್ಡ್ ನೀಡಲು ಕೇಳಿದ್ದನ್ನು ಒಪ್ಪಿದ್ದೇವೆ. ಆಶಾ ಕಾರ್ಯಕರ್ತರಿಗೆ ಫೋರ್ಟಲ್ ನಲ್ಲಿ ಮಾಹಿತಿ ನೀಡಲು‌ ಹೇಳಿದ್ದೇನೆ. ಎ.ಎನ್.ಎಂಗಳು ‌ತಕ್ಷ ತಕ್ಷಣ ಮಾಹಿತಿ ನೀಡಲು ಸೂಚನೆ ನೀಡಿದ್ದೇನೆ. 6 ಸಾವಿರ ರೂ.ಗಳನ್ನು ಏಕ‌ಕಾಲಕ್ಕೆ ಸಂಬಳ ನೀಡಲು ಸೂಚನೆ ನೀಡಲಾಗಿದೆ. ಅವರು‌ 12 ಸಾವಿರ ಸಂಬಳ ನೀಡಲು‌ಕೇಳ್ತಿದ್ದಾರೆ. ಬೇರೆ ರಾಜ್ಯಗಳಲ್ಲಿ ಸಂಬಳ ಹೆಚ್ಚಿದೆ ಎಂಬುದು ಅವರ ವಾದ. ಸರ್ಕಾರ 1000/- ಸಂಬಳ ಹೆಚ್ಚಳ ಮಾಡಲು ಈಗಾಗಲೇ ‌ಪ್ರಸ್ತಾವನೆ ಕಳಿಸಲಾಗಿದೆ. ಆರ್ಥಿಕ ಇಲಾಖೆ ಈ ಬಗ್ಗೆ ಪರಿಶೀಲನೆ ನಡೆಸಬೇಕಾಗುತ್ತೆ. ಆಶಾ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸಲು ವಾಟ್ಸಪ್ ಗ್ರೂಪ್ ಕೂಡ ಮಾಡಲಾಗಿದೆ. ಇಡೀ ರಾಜ್ಯದ ಆಶಾ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದರು.

key words: our government -ready – respond – demands – Asha activists- minister- sriramulu