ಕೋರ್ಟ್ ಗೆ ಹೋಗೋದು ನಮ್ಮ ಹಕ್ಕು: ಅದನ್ನ ಪ್ರಶ್ನಿಸಲು ಅವರು ಯಾರು..?- ಸಚಿವ ಬಿಸಿ ಪಾಟೀಲ್ ಕಿಡಿ…

Promotion

ಬೆಂಗಳೂರು,ಮಾ.22,2021(www.justkannada.in): ಕೋರ್ಟ್ ಗೆ ಹೋಗೋದು ನನ್ನ ಹಕ್ಕಾಗಿದ್ದು, ಅದನ್ನು ಪ್ರಶ್ನಿಸಲು ಅವರು ಯಾರು. ನಮ್ಮ ಹಕ್ಕನ್ನ ಪ್ರಶ್ನಿಸಲು ಕಾಂಗ್ರೆಸ್ ನವರಿಗೆ ಯಾವುದೇ ಹಕ್ಕಿಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಕಿಡಿಕಾರಿದರು.jk

ವಿಧಾನಸೌಧದಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಕೋರ್ಟ್ ಗೆ ಹೋಗೋದು ನನ್ನ ಹಕ್ಕಾಗಿದ್ದು, ಅದನ್ನು ಪ್ರಶ್ನಿಸಲು ಕಾಂಗ್ರೆಸ್ ನವರಿಗೆ ಯಾವುದೇ ಹಕ್ಕಿಲ್ಲ. ಕಾಂಗ್ರೆಸ್ ನಾಯಕರು ನೀತಿ ಸಿದ್ದಾಂತದ ಮೇಲೆ ಹೋರಾಟ ಮಾಡಬೇಕು. ಅವರಿಗೆ ಹೋರಾಟ ಮಾಡಲು ಯಾವುದೇ ವಿಷಯಗಳು ಸಿಗುತ್ತಿಲ್ಲ. ಹೀಗಾಗಿ ಮೈತ್ರಿ ಸರ್ಕಾರ ಪತನಗೊಂಡ ಕಾರಣಕ್ಕೆ ನಮ್ಮ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆಂದು ಬಿ.ಸಿ.ಪಾಟೀಲ್  ಹರಿಹಾಯ್ದರು.

ಯಾವುದೇ ಕಾರಣಕ್ಕೂ  ಸದ್ಯಕ್ಕೆ ಲಾಕ್ಡೌನ್ ಜಾರಿ ಇಲ್ಲ…

ಯಾವುದೇ ಕಾರಣಕ್ಕೂ  ಸದ್ಯಕ್ಕೆ ಲಾಕ್ಡೌನ್ ಜಾರಿ ಮಾಡದಿರಲು ಸರ್ಕಾರ ನಿರ್ಧರಿಸಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ‌. ಪ್ರಸಕ್ತ ಆರ್ಥಿಕ  ಪರಿಸ್ಥಿಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಪರಿಸ್ಥಿತಿ ಇಲ್ಲ. ಕಳೆದ ವರ್ಷಕ್ಕೂ ಈ ವರ್ಷಕ್ಕು ಪರಿಸ್ಥಿತಿ ಬೇರೆ ಇದೆ. ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡಿದ್ದೇವೆ. ಜನರೂ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕೆಂದರು.‌our right – court-question –congress-Minister BC Patil

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇರುವ ಕಾಯ್ದೆಗಳಾದ್ದರಿಂದ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಕೇಂದ್ರದ ನಡೆಯನ್ನು ಬಿ.ಸಿ.ಪಾಟೀಲ್ ಸಮರ್ಥಿಸಿಕೊಂಡರು.

Key words: our right – court-question –congress-Minister BC Patil