ದೇಶದಲ್ಲಿ ಒಂದೇ ದಿನ 4 ಲಕ್ಷಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆ…

Promotion

ನವದೆಹಲಿ,ಮೇ,8,2021(www.justkannada.in): ದೇಶದಲ್ಲಿ ಕೊರೋನಾ 2ನೇ ಅಲೆ ದಿನೇ ದಿನೇ ಹೆಚ್ಚುತ್ತಿದ್ದು  ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  4 ಲಕ್ಷದ ಗಡಿ ದಾಟಿದೆ.jk

 ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 4,01,078 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,18,92,676ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 4,187  ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,38,270ಕ್ಕೆ ಏರಿಕೆಯಾಗಿದೆ.over-4-lakh-covid-positive-cases-detected-single-day-country

ಇನ್ನು ದೇಶದಲ್ಲಿ 37,23,446 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,79,30,960 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 16,73,46,544 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Key words: Over- 4 lakh -Covid positive -cases -detected – single day – country.