ಬ್ಯಾಡ್ಮಿಂಟನ್ ಗ್ರೌಂಡ್’ನಲ್ಲಿ ಬೆವರು ಹರಿಸುತ್ತಿದ್ದಾರೆ ಪರಿಣಿತಿ ಚೋಪ್ರಾ

Promotion

ಬೆಂಗಳೂರು, ಅಕ್ಟೋಬರ್ 5, 2019 (www.justkannada.in): ನಟಿ ಪರಿಣಿತಿ ಚೋಪ್ರಾ ಬ್ಯಾಡ್ಮಿಂಟನ್ ತರಬೇತಿಯನ್ನೂ ಪಡೆಯುತ್ತಿದ್ದಾರೆ. ಬ್ಯಾಡ್ಮಿಂಟನ್ ಮೈದಾನದಲ್ಲಿ ಬೆವರಿಳಿಸುತ್ತಿದ್ದಾರೆ.

ಹೌದು. ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಜೀವನಾಧಾರಿತ ಸಿನಿಮಾಗಾಗಿ ಪರಿಣಿತಿ ಚೋಪ್ರಾ ಸೂಕ್ತ ತರಬೇತಿ ಪಡೆಯುತ್ತಿದ್ದಾರೆ.

ಕ್ರೀಡಾಪಟುವೊಬ್ಬರ ಜೀವನವನ್ನು ಆಧರಿಸಿದ ಸಿನಿಮಾದಲ್ಲಿ ನಟಿಸುವುದೆಂದರೆ ತಮಾಷೆಯ ಮಾತಲ್ಲ. ಅದಕ್ಕಾಗಿ ಕಠಿಣ ಪರಿಶ್ರಮವೂ ಬೇಕಾಗುತ್ತದೆ. ಇದಕ್ಕಾಗಿ ಅಗತ್ಯ ಸಿದ್ಧತೆ ನಡೆಸುತ್ತಿರುವುದಾಗಿ ಪರಿಣಿತಿ ಹೇಳಿದ್ದಾರೆ.