ಪೇ ಸಿಎಂ ಅಭಿಯಾನ: ಕಾಂಗ್ರೆಸ್ ನದ್ಧು ಡರ್ಟಿ ಪಾಲಿಟಿಕ್ಸ್ ಎಂದು ಟೀಕಿಸಿದ ಸಿಎಂ ಬೊಮ್ಮಾಯಿ.

Promotion

ಚಿತ್ರದುರ್ಗ,ಸೆಪ್ಟಂಬರ್,24,2022(www.justkannada.in):  ಕಾಂಗ್ರೆಸ್​ ನಡೆಸುತ್ತಿರುವ ಪೇ ಸಿಎಂ  ಅಭಿಯಾನದ ವಿರುದ್ಧ ಕಿಡಿಕಾರಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನದ್ಧು ಡರ್ಟಿ ಪಾಲಿಟಿಕ್ಸ್ ಎಂದು ಟೀಕಿಸಿದರು.

ಚಿತ್ರದುರ್ಗದಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪೇ ಸಿಎಂ ಅಭಿಯಾನ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು. ಕಾಂಗ್ರೆಸ್ ಪಕ್ಷದಿಂದ ಡರ್ಟಿ ಪಾಲಿಟಿಕ್ಸ್ ಮಾಡಲಾಗುತ್ತಿದೆ. ಇದು ಕಾಂಗ್ರೆಸ್ ನಾಯಕರ ನೈತಿಕ ಅಧಪತನವನ್ನ ತೋರಿಸುತ್ತಿದೆ  ಎಂದು ವಾಗ್ದಾಳಿ ನಡೆಸಿದರು.

ದೆಹಲಿಯಿಂದ ಬಂದ ಬಳಿಕ ಸಂಪುಟ ವಿಸ್ತರಣೆ ನಿರ್ಧಾರ

ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ದೆಹಲಿಗೆ ಹೋಗಿ ಬಂದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ದೆಹಲಿಗೆ ಹೋದಾಗ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುತ್ತೇನೆ. ಅಲ್ಲಿ ಏನು ತಿರ್ಮಾನ ಮಾಡಲಾಗುತ್ತದೆ. ನೋಡೋಣ ಎಂದರು.

Key words: Pay CM –campaign-CM- Bommai -criticized – Congress