ಬೆಂಗಳೂರಿನಲ್ಲಿ ಶಾಂತಿಯುತ ಸಂಭ್ರಮಾಚರಣೆ: ಯಾವುದೇ ಅಹಿತಕರ ಘಟನೆ ನಡೆದಿಲ್ಲ- ಪೊಲೀಸ್ ಆಯುಕ್ತ ಕಮಲ್ ಪಂತ್…

Promotion

ಬೆಂಗಳೂರು,ಜನವರಿ 1,2020(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಾಂತಿಯುತವಾಗಿ ಹೊಸ ವರ್ಷ ಸಂಭ್ರಮಾಚರಣೆ ನಡೆದಿದೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.jk-logo-justkannada-mysore

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಪೊಲೀಸ್ ಆಯುಕ್ತ ಕಮಲ್ ಪಂತ್, ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಶಾಂತಿಯುತವಾಗಿ ನಡೆದಿದೆ. ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ಎಲ್ಲಿಯೂ ಕೂಡ ಕೋವಿಡ್ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಹೇಳಿದರು.peaceful-new-year-celebration-bangalore-police-commissioner-kamal-pant

ಕೊರೋನಾ ರೂಪಾಂತರ ಹಿನ್ನೆಲೆ ಹೊಸ ವರ್ಷಾಚರಣೆ ವೇಳೆ ಪಾರ್ಟಿ ಮಾಡಲು ಬೆಂಗಳೂರಿನಲ್ಲಿ ನಿರ್ಬಂಧ ವಿಧಿಸಲಾಗಿತ್ತು. ನಿನ್ನೆ ಮಧ್ಯಾಹ್ನ 12 ಗಂಟೆಯಿಂದಲೇ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಇನ್ನು ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಗಳಲ್ಲಿ ಸಂಚಾರ ನಿರ್ಬಂಧಿಸಲಾಗಿತ್ತು.

Key words: Peaceful –new year-celebration – Bangalore-  Police Commissioner -Kamal Pant.