“ವೈಯಕ್ತಿಕ ಅಜೆಂಡಾಗಳ ಮೇಲೆ ಕೇಂದ್ರ,ರಾಜ್ಯ ಸರ್ಕಾರ ಆಡಳಿತ” : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು,ಜನವರಿ,17,2021(www.justkannada.in) : ವೈಯಕ್ತಿಕ ಅಜೆಂಡಾಗಳ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಡೆಯುತ್ತಿವೆ. ‌ಸಾರ್ವಜನಿಕರ ಅಭಿಪ್ರಾಯದಂತೆ ನಡೆಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶವ್ಯಕ್ತಪಡಿಸಿದ್ದಾರೆ.jk-logo-justkannada-mysore

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಸಂಸ್ಕೃತಿಗಳು ಮತ್ತು ಭಾಷೆಗಳ ಬಗ್ಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಗೌರವವಿಲ್ಲ. ಅಧಿಕಾರಕ್ಕಾಗಿ ನಮ್ಮ ಸಂಸದರು ಬಾಯಿ ಮುಚ್ಚಿಕೊಂಡಿದ್ದಾರೆ ಎಂದರು.

ಸರ್ಕಾರಕ್ಕೆ ಜನರ ಬಗ್ಗೆ ಆಸಕ್ತಿ ಇಲ್ಲ. ಯಾವುದೇ ಅಭಿವೃದ್ಧಿ ಕಾರ್ಯಗಳು ಜರುಗುತ್ತಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡಿಸೇಲ್ಬೆಲೆ ಗಣನೀಯವಾಗಿ ಹೆಚ್ಚುತ್ತಿದೆ. ಎಲ್ಲ ವಿಚಾರಗಳನ್ನು ಇಟ್ಟುಕೊಂಡು ಸರ್ಕಾರ ಮತ್ತು ದೇಶದ ಜನರನ್ನು ಗಮನ ಸೆಳೆಯಬೇಕಾಗಿದೆ ಎಂದು ಹೇಳಿದರು.

Personal,agendas,Center,State,Government,Administration,President,KPCC D.K.Shivakumar
ಕೃಪೆ: internet

ಕಾಂಗ್ರೆಸ್ ಪಕ್ಷವನ್ನು ಯಾರು ಏನು ಮಾಡುವುದಕ್ಕೂ ಸಾಧ್ಯವಿಲ್ಲ. 2023ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.

 

key words : Personal-agendas-Center-State-Government-Administration-President-KPCC D.K.Shivakumar