ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿಚಾರ : ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ.

Promotion

ಬೆಂಗಳೂರು,ಸೆಪ್ಟಂಬರ್,9,2021(www.justkannada.in):  ದೇಶದಲ್ಲಿ ಪೆಟ್ರೋಲ್ ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಗಗನಕ್ಕೇರಿದ್ದು ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ , ಬೆಲೆ ಏರಿಕೆ ಬಗ್ಗೆ ಸಂಸತ್ ನಲ್ಲಿ ಧ್ವನಿ ಎತ್ತುತ್ತೇನೆ. ಆದರೆ ನನ್ನ ಧ್ವನಿಗೆ ಸಹಾಯ ಮಾಡುವವರು ಕಡಿಮೆ. ಮೋದಿ ಎಲ್ಲರಿಗೂ ಹೆದರಿಸುತ್ತಿದ್ದಾರೆ. ಪೆಟ್ರೋಲ್ ಡೀಸೆಲ್ ರೇಟ್ ಹೆಚ್ಚಾಗುತ್ತಿದೆ. ಆಯಿಲ್ ಬಾಂಡ್ ಎಷ್ಟಕ್ಕೆ ತೆಗೆದುಕೊಂಡಿದ್ದರು ಕೇಳಲಿ. ಜನ ಈಗ ಸತ್ಯವನ್ನ ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಮೋದಿ ಸರ್ಕಾರ ಸುಲಿಗೆ ಮಾಡುತ್ತಿದೆ ಎಂದು ಕಿಡಿಕಾರಿದರು.

ನಾಯಕರ ಕೋಲ್ಡ್ ವಾರ್ ನಿಂದ ಬೆಳಗಾವಿ ಪಾಲಿಕೆಯಲ್ಲಿ ಕಾಂಗ್ರೆಸ್ ಗೆ ಸೋಲು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ,  ನಮ್ಮಲ್ಲಿ ಯಾವುದೇ ಜಗಳಗಳು ಇಲ್ಲ. ನಮ್ಮ ಒಡಕು ಮೂಡಿಸುವ ಕೆಲಸ ಬೇಡ. ಎಲ್ಲರೂ ಒಟ್ಟಾಗಿದ್ದೇವೆ ಎಂದರು.

Key words: Petrol-Diesel-Gas Cylinder-congress-Mallikarjuna kharge- against -PM -Modi